ಗಣೇಶ ಮೆರವಣಿಗೆ; ರಾಜ್ಯದ ವಿವಿಧೆಡೆ ಮೂವರು ಸಾವು
x

ಗಣೇಶ ಮೆರವಣಿಗೆ; ರಾಜ್ಯದ ವಿವಿಧೆಡೆ ಮೂವರು ಸಾವು

ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡ್ಯಾನ್ಸ್ ಮಾಡುವಾಗ ಇಬ್ಬರು ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಮೈಸೂರಿನಲ್ಲಿ ಟ್ರ್ಯಾಕ್ಟರ್‌ನಿಂದ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ.


ಗಣೇಶ ವಿಸರ್ಜನೆ ಸಂಭ್ರಮದಲ್ಲಿ ರಾಜ್ಯದ ವಿವಿಧೆಡೆ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡ್ಯಾನ್ಸ್ ಮಾಡುವಾಗ ಇಬ್ಬರು ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಮೈಸೂರಿನಲ್ಲಿ ಟ್ರ್ಯಾಕ್ಟರ್‌ನಿಂದ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ.

ಮಂಡ್ಯದಲ್ಲಿ ಡ್ಯಾನ್ಸ್‌ ಮಾಡುವಾಗ ಹೃದಯಾಘಾತ

ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣೇಶ ವಿಸರ್ಜ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಂಜುನಾಥ್ ಎಂಬುವರು ಡಿಜೆ ಹಾಡಿಗೆ ಕುಣಿಯುತ್ತಿದ್ದ ವೇಳೆ ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರದಲ್ಲೂ ಕುಸಿದು ಬಿದ್ದು ಸಾವು

ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ 40 ವರ್ಷದ ರೈತ ಲಕ್ಷ್ಮಿಪತಿ ಎಂಬುವರು ಡ್ಯಾನ್ಸ್ ಮಾಡುವಾಗಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ.

ಮೈಸೂರಿನಲ್ಲಿ ಟ್ರ್ಯಾಕ್ಟರ್‌ನಿಂದ ಬಿದ್ದು ಸಾವು

ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ಆಟೋ ರಾಜು (34) ಎಂಬಾತ ಗಣಪನಿಗೆ ಪೂಜೆ ಸಲ್ಲಿಸಲು ಟ್ರ್ಯಾಕ್ಟರ್ ಮೇಲೆ ಹತ್ತಿದ ವೇಳೆ ಆಯ ಕಳೆದುಕೊಂಡು ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಆಯಾ ವ್ಯಾಪ್ತಿಯ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Read More
Next Story