
ವಿ ಸಿ ಕಾಲುವೆಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ.
ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಬಾಲಕರ ದಾರುಣ ಸಾವು
ಸೋನು ಹಾಗೂ ಸಿದ್ದೇಶ್ ಅವರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಸಿಮ್ರಾನ್ಗಾಗಿ ವಿಸಿ ನಾಲೆಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ವಿಶ್ವೇಶ್ವರಯ್ಯ ನಾಲೆಯಲ್ಲಿ ಏಪ್ರಿಲ್ 07ರಂದು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೈಸೂರಿನ ಗೌಸಿಯಾನಗರದ ನಿವಾಸಿಗಳಾದ ಸೋನು (17), ಸಿಮ್ರಾನ್ (16), ಮತ್ತು ಸಿದ್ದೇಶ್ (9) ಈ ದುರ್ಘಟನೆಯಲ್ಲಿ ಮೃತರಾದವರು. ಈ ಮೂವರು ಚಿಕ್ಕಾಯರಳ್ಳಿಯ ಮಾರಮ್ಮ ಜಾತ್ರೆಗೆ ತೆರಳಿದ್ದ ವೇಳೆ, ವಿಶ್ವೇಶ್ವರಯ್ಯ ನಾಲೆಯ ಬಳಿಯ ನಾರ್ತ್ ಬ್ಯಾಂಕ್ ಸಮೀಪ ಈಜಲು ಹೋಗಿದ್ದರು. ಕಾಲು ಜಾರಿ ನೀರಿನಲ್ಲಿ ಬಿದ್ದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸೋನು ಮತ್ತು ಸಿದ್ದೇಶ್ ಅವರ ಮೃತದೇಹಗಳನ್ನು ಈಗಾಗಲೇ ಹೊರತೆಗೆಯಲಾಗಿದೆ, ಆದರೆ ಸಿಮ್ರಾನ್‌ನ ಶವಕ್ಕಾಗಿ ಶೋಧ ಕಾರ್ಯ ಇನ್ನೂ ಮುಂದುವರದಿದೆ. ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಈ ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಕುಟುಂಬದವರು ಮತ್ತು ಸಂಬಂಧಿಕರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಅವರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.