
ಲಾರಿಗೆ ಕಾರು ಡಿಕ್ಕಿ | ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವು
ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡು ಪ್ರವಾಸಕ್ಕೆ ತೆರಳುತ್ತಿದ್ದರು. ಬೆಳಿಗ್ಗೆ11 ರ ಸುಮಾರಿಗೆ ಕೆಎಸ್ಆರ್‌ಟಿಸಿ ಬಸ್ ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಗೆ, ಡಿಕ್ಕಿ ಹೊಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಭೀಕರ ಸಂಭವಿಸಿದ್ದು, ಬೆಂಗಳೂರು ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಮೃತಪಟ್ಟವರು. ಮತ್ತೊಬ್ಬ ವಿದ್ಯಾರ್ಥಿ ಪೃಥ್ವಿ ಎಂಬಾತನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡು ಪ್ರವಾಸಕ್ಕೆ ತೆರಳುತ್ತಿದ್ದರು. ಬೆಳಿಗ್ಗೆ11 ರ ಸುಮಾರಿಗೆ ಕೆಎಸ್ಆರ್‌ಟಿಸಿ ಬಸ್ ಹಿಂದಿಕ್ಕುವ ಭರದಲ್ಲಿ ಎದುರಿಗೆ ಬರುತ್ತಿದ್ದ ಲಾರಿಗೆ, ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಚಾಲಕನನ್ನು ಬಂಧಿಸಲಾಗಿದೆ. ಲಾರಿ ಚಾಲಕನ ವಿರುದ್ಧ ಬಿಎನ್ಎಸ್ ಸೆಕ್ಷನ್ 281 ಮತ್ತು 106 ಅಡಿ ಪ್ರಕರಣ ದಾಖಲಿಸಲಾಗಿದೆ.
ರಾಮನಗರ ಮೂಲಕ ಹಾದು ಹೋಗುವ ಈ ಹೆದ್ದಾರಿಯಲ್ಲಿ ಅತಿ ಹೆಚ್ಚು ಅಪಘಾತ ಪ್ರಕರಣಗಳು ದಾಖಲಾಗಿವೆ. 2020ರಲ್ಲಿ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಸಮೀಪ ಚನ್ನಪಟ್ಟಣ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಮಧುಸೂಧನ್ ಜೋಶಿ ದಂಪತಿ ದುರ್ಮರಣ ಹೊಂದಿದ್ದರು.