ಹೆಲ್ಮೆಟ್‌ ಧರಿಸಿಲ್ಲವೆಂದು ಟಿಪ್ಪರ್‌ ಚಾಲಕನಿಗೆ ದಂಡ!
x

ಹೆಲ್ಮೆಟ್‌ ಧರಿಸಿಲ್ಲವೆಂದು ಟಿಪ್ಪರ್‌ ಚಾಲಕನಿಗೆ ದಂಡ!


ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್​ ಧರಿಸಿಲ್ಲವೆಂದು ʼಡ್ರೈವಿಂಗ್ ವಿಥೌಟ್​ ಹೆಲ್ಮೆಟ್‌ʼ ಕಾರಣ ನೀಡಿ ದಂಡ ಹಾಕಿರುವ ವಿಚಿತ್ರ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಇದೀಗ ಆ ಟಿಕೆಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಚಂದ್ರಕಾಂತ್ ಹಳ್ಳೇರ ಎನ್ನುವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ಆ ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು ಕ್ಷಣ ಶಾಕ್ ಆಗಿದ್ದಾರೆ. ಯಾಕಂದ್ರೆ ರಶೀದಿಯಲ್ಲಿ ಹಾಕಿರುವ ದಂಡದ ಕಾರಣ ಡ್ರೈವಿಂಗ್ ವಿಥೌಟ್​ ಹೆಲ್ಮೆಟ್‌ಗೆ ಎಂದು ಇತ್ತು. ಈ ಬಗ್ಗೆ ಚಾಲಕ ಚಂದ್ರಕಾಂತ್, ಸರ್ ನಾನು ಬೈಕ್ ಓಡಿಸುತ್ತಿಲ್ಲ. ಟಿಪ್ಪರ್​ ಚಾಲನೆ ಮಾಡುತ್ತಿದ್ದೇನೆ ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ. ಆದರೆ, ಪೊಲೀಸರು, "ಹೇ ಅದೆಲ್ಲಾ ಇರುತ್ತೆ.." ಎಂದು ಹೇಳಿ ರಶೀದಿ ಕೊಟ್ಟು ಕಳುಹಿಸಿದ್ದಾರೆ.

ಮಾವಿನಕುರ್ವೆಯ ವಿನುತಾ ವಿನೋದ್ ನಾಯ್ಕ ಎಂಬುವವರ ಟಿಪ್ಪರ್ ಲಾರಿಗೆ ಚಂದ್ರಕಾಂತ್ ಹಳ್ಳೇರ ಚಾಲಕರಾಗಿದ್ದಾರೆ. ಮರಳು ತುಂಬಿದ ಲಾರಿಯನ್ನು ಚಾಲನೆ ಮಾಡಿಕೊಂಡು ಹೋಗುವಾಗ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅಳ್ಳಂಕಿ ಎಂಬಲ್ಲಿ ಪೊಲೀಸರು ಅಡ್ಡಹಾಕಿದ್ದಾರೆ. ಈ ವೇಳೆ ಸಮವಸ್ತ್ರ ಧರಿಸಿಲ್ಲ ಎನ್ನುವ ಕಾರಣಕ್ಕೆ ದಂಡ ಹಾಕುವ ಬದಲು ಹೆಲ್ಮೆಟ್ ಧರಿಸಿಲ್ಲ ಎಂದು ರಶೀದಿಯಲ್ಲಿ ಉಲ್ಲೇಖಿಸಿ ದಂಡ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ.

Read More
Next Story