
ಬೆಂಗಳೂರಿನಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು 8ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಕಾಮಾಕ್ಷಿಪಾಳ್ಯದ ನಿವಾಸಿ ಶಶಾಂಕ್ (12) ಮೃತ ದುರ್ದೈವಿ. ಈತ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಶಶಾಂಕ್, ಮನೆಯಲ್ಲಿ ಊಟ ಮಗಿಸಿ, ನಂತರ ತನ್ನ ಸ್ನೇಹಿತನನ್ನು ಭೇಟಿಯಾಗಲು ಸೈಕಲ್‌ನಲ್ಲಿ ಹೋಗುತ್ತಿದ್ದ.
ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್‌ನಲ್ಲಿ ಹೋಗುತ್ತಿದ್ದ 12 ವರ್ಷದ ಬಾಲಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಕಾಮಾಕ್ಷಿಪಾಳ್ಯದ ನಿವಾಸಿ ಶಶಾಂಕ್ (12) ಮೃತ ದುರ್ದೈವಿ. ಸ್ಥಳೀಯ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶಶಾಂಕ್, ಸಂಜೆ ಮನೆಯಲ್ಲಿ ಊಟ ಮುಗಿಸಿ ತನ್ನ ಸ್ನೇಹಿತನನ್ನು ಭೇಟಿಯಾಗಲು ಸೈಕಲ್‌ನಲ್ಲಿ ಹೊರಟಿದ್ದ. ಈ ವೇಳೆ, ವೇಗವಾಗಿ ಬಂದ ಮಿನಿ ಟಿಪ್ಪರ್ ಲಾರಿ ಆತನ ಸೈಕಲ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಶಶಾಂಕ್ ಸೈಕಲ್‌ನಿಂದ ಕೆಳಗೆ ಬಿದ್ದಿದ್ದು, ಅದೇ ಸಮಯದಲ್ಲಿ ಲಾರಿಯ ಚಕ್ರ ಆತನ ತಲೆಯ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಬಾಲಕನು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಅಪಘಾತದ ನಂತರ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಮತ್ತು ಕಾನೂನು ಸುವ್ಯವಸ್ಥೆ ಪೊಲೀಸರು, ಮಹಜರು ನಡೆಸಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾಗಿರುವ ಲಾರಿ ಚಾಲಕನ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.