ಬೆಳಗಾವಿ ʼಗಾಂಧಿ ಭಾರತʼ | ಕಾರ್ಯಕ್ರಮಕ್ಕೆ ಸರ್ಕಾರಿ ಅನುದಾನ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಾಳೆ
x
ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು

ಬೆಳಗಾವಿ ʼಗಾಂಧಿ ಭಾರತʼ | ಕಾರ್ಯಕ್ರಮಕ್ಕೆ ಸರ್ಕಾರಿ ಅನುದಾನ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಾಳೆ

ರಾಜ್ಯದಲ್ಲಿ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಅನುದಾನವಿಲ್ಲದೇ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ. ಹೀಗಿರುವಾಗ ಗಾಂಧೀಜಿಯವರ ಆಶಯಗಳಿಗೆ ವಿರುದ್ಧವಾಗಿ ಜನರ ತೆರಿಗೆ ಹಣವನ್ನು ಸರ್ಕಾರ ಪೋಲು ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.


ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ರಾಜ್ಯ ಸರ್ಕಾರ ಜನರ ತೆರಿಗೆ ಹಣದಲ್ಲಿ ಆಚರಿಸುತ್ತಿದೆ ಎಂದು ಆರೋಪಿಸಿರುವ ಭಾರತೀಯ ಜನತಾ ಪಾರ್ಟಿ, ಆಡಳಿತ ಪಕ್ಷದ ಧೋರಣೆ ಖಂಡಿಸಿ ಧರಣಿ ನಡೆಸಲು ತೀರ್ಮಾನಿಸಿದೆ.

ಬೆಂಗಳೂರಿನ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಶುಕ್ರವಾರ ಧರಣಿ ನಡೆಸಲಿದೆ. ರಾಜ್ಯದಲ್ಲಿ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಅನುದಾನವಿಲ್ಲದೇ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ. ಹೀಗಿರುವಾಗ ಗಾಂಧೀಜಿಯವರ ಆಶಯಗಳಿಗೆ ವಿರುದ್ಧವಾಗಿ ಜನರ ತೆರಿಗೆ ಹಣವನ್ನು ಸರ್ಕಾರ ಪೋಲು ಮಾಡುತ್ತಿದೆ. ಇದನ್ನು ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗಹಿಸಲಿದ್ದಾರೆ. ಕಾಂಗ್ರೆಸ್‌ ಪಕ್ಷವು ರಾಜಕೀಯ ಲಾಭಕ್ಕಾಗಿ ಶತಮಾನೋತ್ಸವ ಕಾರ್ಯಕ್ರಮ ನಡೆಸುತ್ತಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಕಾಂಗ್ರೆಸ್ ಜನಾಂದೋಲನವಾಗಿತ್ತು. ಆದರೆ, ಈಗ ರಾಜಕೀಯ ಪಕ್ಷವಾಗಿದೆ. ಕಾಂಗ್ರೆಸ್‌ ವಿಸರ್ಜಿಸುವಂತೆ ಗಾಂಧಿ ಅವರೇ ಹೇಳಿದ್ದರೂ ನೆಹರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಂಡರು. ಗಾಂಧೀಜಿ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವ ಕಾರಣ ಇದೊಂದು ನಕಲಿ ಗಾಂಧಿಗಳ ಸಮಾವೇಶ ಎಂದು ಟೀಕಿಸಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಕರ್ನಾಟಕ ಸರ್ಕಾರ ಬೊಕ್ಕಸದಿಂದ ಕೋಟಿಗಟ್ಟಲೆ ಹಣ ವ್ಯಯಿಸಿ ಪಕ್ಷದ ಸಮಾವೇಶ ಮಾಡುತ್ತಿದೆ. ಇದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ವತಿಯಿಂದ ಗಾಂಧಿ ನೆನಪಿನ ಕಾರ್ಯಕ್ರಮ ನಡೆಸಿದ್ದರೆ ಪ್ರಧಾನಿ, ಕೇಂದ್ರ ಗೃಹ ಸಚಿವರು, ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನೂ ಆಹ್ವಾನಿಸಬೇಕಿತ್ತು. ಆದರೆ, ಯಾರನ್ನೂ ಆಹ್ವಾನಿಸದೇ ಕಾಂಗ್ರೆಸ್ ನಾಯಕರನ್ನು ಮಾತ್ರ ಆಹ್ವಾನಿಸಲಾಗಿದೆ. ಹೀಗಾಗಿ ಇದು ಸರ್ಕಾರಿ ಕಾರ್ಯಕ್ರಮವಲ್ಲ. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಜನರ ತೆರಿಗೆ ಹಣ ಬಳಸುತ್ತಿರುವುದು ಅಕ್ಷಮ್ಯ ಎಂದು ದೂರಿದ್ದಾರೆ.

ಬಿಜೆಪಿ ಅಖಂಡ ಭಾರತದ ಚಿತ್ರ ತೋರಿಸಿದ್ದರೆ, ಕಾಂಗ್ರೆಸ್‌ನವರು ಜಮ್ಮು-ಕಾಶ್ಮೀರ ಇಲ್ಲದ ಭಾರತದ ಚಿತ್ರ ತೋರಿಸುತ್ತಿದ್ದಾರೆ. ಭಾರತದ ಭೂಪಟವನ್ನೇ ಛಿದ್ರ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದೆ ಎಂದು ಟೀಕಿಸಿದ್ದಾರೆ.

Read More
Next Story