ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿ; 25ಕ್ಕೂ ಹೆಚ್ಚು ಮಂದಿಗೆ ಗಾಯ
x

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 25ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯಗಳಾಗಿವೆ. 

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿ; 25ಕ್ಕೂ ಹೆಚ್ಚು ಮಂದಿಗೆ ಗಾಯ

ಬಸ್​ ಅಪಘಾತದಲ್ಲಿ 25ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಗಾಯಗೊಂಡ ಪ್ರವಾಸಿಗರನ್ನು ಚಿಕ್ಕಮಗಳೂರು ಮತ್ತು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


ಪ್ರವಾಸಿಗರಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 25ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ.

ತೀವ್ರ ಮಂಜಿನ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

ಬೆಂಗಳೂರಿನ ಖಾಸಗಿ ಕಂಪನಿಯ ಸಿಬ್ಬಂದಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ತೆರಳುತ್ತಿದ್ದರು. ಬೆಂಗಳೂರಿನಿಂದ ಕುದುರೆಮುಖಕ್ಕೆ ಬಸ್ ತೆರಳುತ್ತಿದ್ದ ವೇಳೆ ಬಸ್‌ ಪಲ್ಟಿ ಆಗಿದೆ. ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿದ್ದಾರೆ.

ತಕ್ಷಣ ನೆರವಿಗೆ ಧಾವಿಸಿದ ಸ್ಥಳೀಯರು ಗಾಯಗೊಂಡ ಪ್ರವಾಸಿಗರನ್ನು ಚಿಕ್ಕಮಗಳೂರು ಮತ್ತು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರಲ್ಲಿ ಐದು ದಿನ ಆರೆಂಜ್ ಅಲರ್ಟ್ ಹಿನ್ನಲೆಯಲ್ಲಿ ಚಾರಣ ಮಾಡುವಾಗ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಗುಡ್ಡ ಕುಸಿತ, ದಿಢೀರ್ ಪ್ರವಾಹದ ಸಂಭವಿಸುವ ಸಾಧ್ಯತೆ ಇದೆ ಎಂದು ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Read More
Next Story