Horrific tragedy in Bengaluru: Toddler killed due to car driver’s negligence
x

ಸಾಂದರ್ಭಿಕ ಚಿತ್ರ

ಕುಣಿಗಲ್ ಬಳಿ ಭೀಕರ ಅಪಘಾತ: ಬೈಕ್‌ಗೆ ಟಿಪ್ಪರ್ ಡಿಕ್ಕಿ, ಅಜ್ಜ-ಮೊಮ್ಮಗ ಸೇರಿ ಮೂವರ ದುರ್ಮರಣ

ಮೃತರಾದ ಮೂವರೂ ಉಂಗ್ರ ಗ್ರಾಮದಿಂದ ಹಳೆವೂರು ಗ್ರಾಮದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಸುಗ್ಗನಹಳ್ಳಿ ಬಳಿ ವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.


ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಜ್ಜ, ಮೊಮ್ಮಗ ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲ್ಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಸುಗ್ಗನಹಳ್ಳಿ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಉಂಗ್ರ ಗ್ರಾಮದ ನಿವಾಸಿಗಳಾದ ಹುಚ್ಚಪ್ಪ (65), ಅವರ ಮೊಮ್ಮಗ ಪ್ರೀತಮ್ (11) ಮತ್ತು ಹುಚ್ಚಪ್ಪ ಅವರ ನಾದಿನಿ ನಿಂಗಮ್ಮ (45) ಮೃತಪಟ್ಟ ದುರ್ದೈವಿಗಳು.

ಮೃತರಾದ ಮೂವರೂ ಉಂಗ್ರ ಗ್ರಾಮದಿಂದ ಹಳೆವೂರು ಗ್ರಾಮದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಸುಗ್ಗನಹಳ್ಳಿ ಬಳಿ ವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರೂ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಹುಚ್ಚಪ್ಪ ಮತ್ತು ಮೊಮ್ಮಗ ಪ್ರೀತಮ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ನಿಂಗಮ್ಮ ಅವರನ್ನು ಚಿಕಿತ್ಸೆಗಾಗಿ ತಕ್ಷಣವೇ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ನಂತರ ಟಿಪ್ಪರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More
Next Story