ವಾಲ್ಮೀಕಿ ನಿಗಮ ಹಗರಣ| ಸಚಿವ ನಾಗೇಂದ್ರ ರಾಜೀನಾಮೆ ಖಚಿತ ಪಡಿಸಿದ ಡಿಸಿಎಂ
x

ವಾಲ್ಮೀಕಿ ನಿಗಮ ಹಗರಣ| ಸಚಿವ ನಾಗೇಂದ್ರ ರಾಜೀನಾಮೆ ಖಚಿತ ಪಡಿಸಿದ ಡಿಸಿಎಂ


ಬಹುಕೋಟಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಕೇಳಿಬಂದಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸ್ವತಃ ಖಚಿತಪಡಿಸಿದ್ದಾರೆ.

ಗುರುವಾರ ಮಾಧ್ಯಮದ ಜತೆ ಮಾತನಾಡಿದ ಅವರು, “ಪಕ್ಷ ಹಾಗೂ ಸರ್ಕಾರಗ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ” ಎಂದು ಹೇಳಿದ್ದಾರೆ.

ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, “ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು” ಎಂದರಲ್ಲದೆ, "ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, “ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ” ಎಂದು ಹೇಳಿದ್ದಾರೆ.


Read More
Next Story