Yadgir: Two girls drown while washing clothes
x

ಸಾಂದರ್ಭಿಕ ಚಿತ್ರ

ಮಂಡ್ಯದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

ಕೆಲವು ದಿನಗಳ ಹಿಂದೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈ.ಜಿ. ಗುಡ್ಡ ಜಲಾಶಯದಲ್ಲಿ ಮತ್ತೊಂದು ಭೀಕರ ಘಟನೆ ಸಂಭವಿಸಿದೆ.


ಮಂಡ್ಯದಲ್ಲಿ ಭಾನುವಾರ ಬೆಳಗ್ಗೆ ಆಘಾತಕಾರಿ ಘಟನೆಯೊಂದು ನಡೆದಿದೆ. ಮದ್ದೂರು ತಾಲೂಕಿನ ಕ್ಯಾತಘಟ್ಟ ಗ್ರಾಮದ ಬಳಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಆಲಭುಜನಹಳ್ಳಿಯ ಚೇತನ್ (14) ಮತ್ತು ದರ್ಶನ್ (15 ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ದುರ್ಘಟನೆ ಕೆ.ಎಂ. ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೆಲವು ದಿನಗಳ ಹಿಂದೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈ.ಜಿ. ಗುಡ್ಡ ಜಲಾಶಯದಲ್ಲಿ ಮತ್ತೊಂದು ಭೀಕರ ಘಟನೆ ಸಂಭವಿಸಿದೆ. ಬೆಂಗಳೂರು ಮೂಲದ ಮೂವರು ಯುವತಿಯರು ಜಲಾಶಯದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ರಾಘವಿ (18), ಮಧುಮಿತ (20), ಮತ್ತು ರಮ್ಯಾ (22) ಎಂದು ಗುರುತಿಸಲಾಗಿದೆ. ಅವರೊಂದಿಗೆ ಇದ್ದ ನಾಲ್ವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ವೈ.ಜಿ. ಗುಡ್ಡ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಈ ಯುವತಿಯರು ಬಂದಿದ್ದರು. ಮಧ್ಯಾಹ್ನ ಏಳು ಮಂದಿ ಸೇರಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಹಿನ್ನೀರಿಗೆ ಇಳಿದು ಆಟವಾಡುತ್ತಿದ್ದಾಗ, ಒಬ್ಬ ಯುವತಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಲು ಪ್ರಾರಂಭಿಸಿದ್ದಾಳೆ. ಆಕೆಯನ್ನು ರಕ್ಷಿಸಲು ಮುಂದಾದ ಉಳಿದಿಬ್ಬರು ಸಹ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ. ಕಣ್ಣೆದುರಿಗೆ ತಮ್ಮವರು ಮುಳುಗುವುದನ್ನು ಕಂಡ ಉಳಿದವರು ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಸ್ಥಳೀಯರು ಬರುವಷ್ಟರಲ್ಲಿ ಮೂವರು ಯುವತಿಯರು ನೀರು ಪಾಲಾಗಿದ್ದರು.

Read More
Next Story