
ಖಾಸಗಿ ಬಸ್ ಮತ್ತು ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಕಾರ್ಕಳದಲ್ಲಿ ಖಾಸಗಿ ಬಸ್- ಕ್ರೂಸರ್ ನಡುವೆ ಅಪಘಾತ; ಮೂವರು ದುರ್ಮರಣ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಮತ್ತು ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 8 ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ -169ರಲ್ಲಿ ನಡೆದಿದೆ.
ಕಾರ್ಕಳ-ಬಜಗೋಳಿ ರಾಷ್ಟ್ರೀಯ ಹೆದ್ದಾರಿಯ ಮಿಯಾರು ಸಮೀಪ ಖಾಸಗಿ ಬಸ್ ಹಾಗೂ ಕ್ರೂಸರ್ ವಾಹನದ ನಡುವೆ ಈ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನದ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಬೇಕಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

