ಕಲ್ಯಾಣ ಕರ್ನಾಟಕದ ರೈತರಿಗೆ ಯುಗಾದಿ ಕೊಡುಗೆ ; ಎರಡನೇ ಬೆಳೆಗೆ 2 ಟಿಎಂಸಿ ನೀರು ಬಿಡುಗಡೆಗೆ ಸರ್ಕಾರ ಆದೇಶ
x

ಕಲ್ಯಾಣ ಕರ್ನಾಟಕದ ರೈತರಿಗೆ ಯುಗಾದಿ ಕೊಡುಗೆ ; ಎರಡನೇ ಬೆಳೆಗೆ 2 ಟಿಎಂಸಿ ನೀರು ಬಿಡುಗಡೆಗೆ ಸರ್ಕಾರ ಆದೇಶ

ಏ.1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳು ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ.


ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಏ.1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳು ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರವರೆಗೆ ನೀರಾವರಿಗೆ 11ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14ಟಿಎಂಸಿ ಅಗತ್ಯವಿದ್ದು, 3ಟಿಎಂಸಿ ನೀರು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಏ. 6ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದಿದ್ದಾರೆ.

2024 ಸೆ. 24ರಂದು ಸಿಎಂ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಎರಡನೇ ಬೆಳೆಗೆ ನೀರು ಹರಿಸಲು ಸರ್ಕಾರ ಬದ್ದವಾಗಿದೆ ಎಂದು ಭರವಸೆ ನೀಡಿದ್ದರು.

ತುಂಗಭದ್ರಾ ಜಲಾಶಯದಿಂದ ಪ್ರತಿ ವರ್ಷ 30 ಟಿಎಂಸಿ ಅಡಿ ನೀರು ವ್ಯರ್ಥವಾಗಿ ಆಂಧ್ರಪ್ರದೇಶಕ್ಕೆ ಹರಿದುಹೋಗುತ್ತಿದ್ದು, ಕನಕಗಿರಿ ತಾಲೂಕಿನ ನವಲಿ ಬಳಿ ಸಮನಾಂತರ ಆಣೆಕಟ್ಟು ಕಟ್ಟಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನವಲಿ ಸಮಾನಾಂತರ ಜಲಾಶಯ ನಿರ್ಮಾಣದಿಂದ ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಎರಡನೇ ಬೆಳೆಗೆ ನೀರು ಒದಗಿಸಬಹುದಾಗಿದೆ.

Read More
Next Story