
ಆಲಮಟ್ಟಿ ಜಲಾಶಯ ಹಾಗೂ ಭೂಸ್ವಾಧೀನ ಪರಿಹಾರಕ್ಕೆ ಸಂಬಂಧಿದಂತೆ ಸರ್ಕಾರ ಹೊರಡಿಸಿರುವ ಆದೇಶ
ಯುಕೆಪಿ-3: ಭೂಸ್ವಾಧೀನ ಪರಿಹಾರ ದರ ನಿಗದಿಪಡಿಸಿ ಸರ್ಕಾರದಿಂದ ಅಧಿಕೃತ ಆದೇಶ
ನಾಲ್ಕು ಆರ್ಥಿಕ ವರ್ಷದೊಳಗೆ ಭರಿಸಲು ವಾರ್ಷಿಕವಾಗಿ ಸುಮಾರು 18 ಸಾವಿರ ಕೋಟಿ ರೂ. ವಾರ್ಷಿಕ ಅನುದಾನವನ್ನು ಜಲಸಂಪನ್ಮೂಲ ಇಲಾಖೆಗೆ ಬಜೆಟ್‌ನಲ್ಲಿ ಒದಗಿಸುವುದು ಎಂದು ಆದೇಶದಲ್ಲಿ ತಿಳಿಸಿದೆ.
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂಸ್ವಾಧೀನದ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ, ಒಣ ಭೂಮಿಗೆ 30 ಲಕ್ಷ ರೂ. ಪರಿಹಾರ ದರ ನಿಗದಿಪಡಿಸಿ ಸರ್ಕಾರ ಆದೇಶಿಸಿದೆ.
ಭೂಸ್ವಾಧೀನ, ಪುನರ್‌ನಿರ್ಮಾಣ ಮತ್ತು ಪುನರ್ವಸತಿ ಕಾರ್ಯಕ್ರಮಗಳಿಗೆ ಅಗತ್ಯವಿರುವ ಹೆಚ್ಚುವರಿ ಸುಮಾರು 75 ಸಾವಿರ ಕೋಟಿ ರೂ. ಮೊತ್ತವನ್ನು ನಾಲ್ಕು ಆರ್ಥಿಕ ವರ್ಷದೊಳಗೆ ಭರಿಸಲು ವಾರ್ಷಿಕವಾಗಿ ಸುಮಾರು 18 ಸಾವಿರ ಕೋಟಿ ರೂ. ವಾರ್ಷಿಕ ಅನುದಾನವನ್ನು ಜಲಸಂಪನ್ಮೂಲ ಇಲಾಖೆಗೆ ಬಜೆಟ್‌ನಲ್ಲಿ ಒದಗಿಸುವುದು ಎಂದು ಆದೇಶದಲ್ಲಿ ತಿಳಿಸಿದೆ.
ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಸುಮಾರು 75 ಸಾವಿರ ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ಪೂರ್ಣಗೊಳಿಸಲು, ಒಪ್ಪಿತ ತೀರ್ಪಿನ ಮೂಲಕ ಭೂಸ್ವಾಧೀನದ ದರವನ್ನು ಸೆಪ್ಟೆಂಬರ್ 16 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ತಿಳಿಸಿದರು.
2023ರಲ್ಲಿ ಬಿಜೆಪಿ ಸರ್ಕಾರ ಒಣಭೂಮಿಗೆ 20 ಲಕ್ಷ ರೂ. ಹಾಗೂ ನೀರಾವರಿಗೆ 24 ಲಕ್ಷ ರೂ. ಪರಿಹಾರದ ಮೊತ್ತ ನೀಡಲು ತೀರ್ಮಾನಿಸಿತ್ತು. ಆದರೆ ರೈತರು ಒಪ್ಪಿರಲಿಲ್ಲ. ಹಾಗಾಗಿ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರೈತ ಸಂಘಟನೆಗಳು, ಎಲ್ಲಾ ಪಕ್ಷದ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಹಲವು ಸಭೆ ನಡೆಸಿ, ಅಭಿಪ್ರಾಯ ಕ್ರೋಢೀಕರಿಸಲಾಗಿತ್ತು. ಎಲ್ಲರ ಅಭಿಪ್ರಾಯದಂತೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲಾಗಿತ್ತು. ಅದರಂತೆ ಅ.9 ರಂದು ಅಧಿಕೃತ ಆದೇಶ ಹೊರಡಿಸುವ ಮೂಲಕ ನೀಡಿದ ಭರವಸೆ ಈಡೇರಿಸಲಾಗಿದೆ ಎಂದರು.
ಭರವಸೆ ಈಡೇರಿಕೆ
ಇದು ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ. ರೈತರಿಗೆ ನೀಡಿದ್ದ ಭರವಸೆ ಈಡೇರಿಸಲಾಗಿದೆ. ಯುಕೆಪಿಯಿಂದ ಸಂತ್ರಸ್ತರಾಗಲಿರುವ ಜನತೆ ತಮ್ಮ ಪರಿಕಲ್ಪನೆಯ ಜೀವನವನ್ನು ಕಟ್ಟಿಕೊಳ್ಳಲು ಕಾಯುತ್ತಿದ್ದರು. ಸರ್ಕಾರದ ಈ ನಿರ್ಧಾರ ನಮ್ಮ ರೈತ ಕುಟುಂಬಗಳಿಗೆ ಸಂತಸ ತಂದಿದೆ ಎಂದು ಹೇಳಿದರು.
ರೈತರ ಜೀವನಮಟ್ಟ ಸುಧಾರಣೆ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಹೆಚ್ಚಿಸಲು ಅನುಮತಿ ನೀಡಲಾಗಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಆಲಮಟ್ಟಿಯ ಹಿನ್ನೀರಿನಿಂದ ಸುಮಾರು 75 ಸಾವಿರ ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗಲಿದೆ. ಜಲಾಶಯ ಹೆಚ್ಚಳದಿಂದ 5.94 ಲಕ್ಷ ಹೆಕ್ಟೇರ್‌ಗಿಂತ ಹೆಚ್ಚು (ಸುಮಾರು 14 ರಿಂದ 15 ಲಕ್ಷ ಎಕರೆ) ಭೂಮಿಗೆ ನೀರಾವರಿ ಕಲ್ಪಿಸಬಹುದಾಗಿದೆ. ಯುಕೆಪಿ ಮೂರನೇ ಹಂತ ಬೃಹತ್ ನೀರಾವರಿ ಯೋಜನೆಯಾಗಿದ್ದು, ಈ ಭಾಗದ ರೈತರ ಜಮೀನಿಗೆ ನೀರೊದಗಿಸಿ, ಅವರ ಜೀವನ ಮಟ್ಟದ ಸುಧಾರಣೆಯಾಗಲಿದೆ.
ಯೋಜನೆಗೆ ಸುಮಾರು 75 ಸಾವಿರ ಕೋಟಿ ರೂ. ವೆಚ್ಚ
ಯೋಜನೆಗೆ 1,33,867 ಎಕರೆ ಜಮೀನು ಬೇಕಾಗಿದ್ದು, 75,563 ಎಕರೆ ಮುಳುಗಡೆಯಾಗಲಿದೆ 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ವವ್ಯಸ್ಥೆ ಕಾರ್ಯಗಳಿಗೆ 6469 ಎಕರೆ ಅವಶ್ಯಕತೆಯಿದೆ. ಇದರಿಂದ ಸುಮಾರು 20 ಗ್ರಾಮಗಳು , ಕೆಲವು ಪಟ್ಟಣ ವಾರ್ಡ್‌ಗಳು ಮುಳುಗಡೆಯಾಗಲಿವೆ. ಒಟ್ಟು 1,33,867 ಎಕರೆಗೆ ಭೂಸ್ವಾಧೀನ ಪರಿಹಾರ ನೀಡುವ ಐತಿಹಾಸಿಕ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಉದ್ದೇಶಕ್ಕಾಗಿ ಪ್ರತಿವರ್ಷ ಸುಮಾರು 18 ಸಾವಿರ ಕೋಟಿ ರೂಗಳ ವೆಚ್ಚ ಬರಲಿದೆ ಎಂದು ಸರ್ಕಾರ ತಿಳಿಸಿದೆ.