ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನೇ ಕೊಲೆಗೈದ ಮಾವ
x

ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನೇ ಕೊಲೆಗೈದ ಮಾವ

ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ.


ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ನಡೆದಿದೆ.

14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ. ಪೊಲೀಸರು ಬಾಲಕ ಸೋದರ ಮಾವ ನಾಗಪ್ರಸಾದ್(50) ಎಂಬಾತನನ್ನು ಬಂಧಿಸಿದ್ದಾರೆ. ಮೃತ ಬಾಲಕನು ನಾಗಪ್ರಸಾದ್ ಅವರ ಸಹೋದರಿಯಾದ ಶಿಲ್ಪಾ ಅವರ ಮಗ. ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಮಾಡಿದ್ದ. ಇದರಿಂದ ಬೇಸತ್ತಿದ್ದ ನಾಗಪ್ರಸಾದ್ ಸೋಮವಾರ ಬೆಳಕಿನ ಜಾವ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ. ನಂತರ ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ಹಣವಿಲ್ಲದೆ ಮೆಜೆಸ್ಟಿಕ್​​ನಲ್ಲಿ 3 ದಿನ ಕಾಲ ಕಳೆದಿದ್ದಾರೆ. ನಂತರ ಸೋಲದೇವನಹಳ್ಳಿ ಠಾಣೆಗೆ ಹೋಗಿ ಶರಣಾಗಿದ್ದಾರೆ.

Read More
Next Story