ದರ್ಶನ್ ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!
x
ನಟ ದರ್ಶನ್‌ ಮತ್ತು ಉಪೇಂದ್ರ

ದರ್ಶನ್ ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತಿರುವ ದರ್ಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ಅವರು ಈಗ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.


ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತಿರುವ ದರ್ಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ಅವರು ಈಗ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ʻʻಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದುʼʼಎಂದು ನೇರವಾಗಿಯೇ ಹೇಳಿಕೊಂಡಿದ್ದಾರೆ.

ಉಪೇಂದ್ರ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ ….. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೊ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು.

ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.

ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆʼʼಎಂದು ಬರೆದುಕೊಂಡಿದ್ದಾರೆ.

ಏನಿದು ಪ್ರಕರಣ

ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬವರನ್ನು ಜೂನ್‌ 8ರಂದು ಕಿಡ್ನಾಪ್‌ ಮಾಡಿ ದರ್ಶನ್‌ ಮತ್ತು ಗ್ಯಾಂಗ್‌ ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಜೂನ್‌ 9ರಂದು ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

Read More
Next Story