Vaccinate children with polio keep them away from disabilities Minister K.H. Muniyappa
x

ಮಗುವಿಗೆ ಪಲ್ಸ್‌ ಪೋಲಿಯೋ ಹಾಕಿದ ಸಚಿವ ಕೆ.ಎಚ್‌. ಮುನಿಯಪ್ಪ

ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ, ಅಂಗವೈಕಲ್ಯದಿಂದ ದೂರ ಮಾಡಿ: ಸಚಿವ ಕೆ.ಎಚ್‌. ಮುನಿಯಪ್ಪ

ಎಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಹಾಗೂ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.


Click the Play button to hear this message in audio format

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ಹಾಕಿಸುವ ಮೂಲಕ ಪೋಲಿಯೊ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡಬೇಕಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದರು.

ಭಾನುವಾರ(ಡಿ.21) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿಯ ತಾಲ್ಲೂಕಿನ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯವಿಲ್ಲದೆಯೇ ಮಕ್ಕಳಿಗೆ ಪೋಲಿಯೊ ಹನಿಯನ್ನು ತಪ್ಪದೇ ಹಾಕಿಸಬೇಕು. ಮಕ್ಕಳನ್ನು ಅಂಗವಿಕಲತೆಯಿಂದ ಪಾರು ಮಾಡಿ. ಪೋಲಿಯೊ ಹನಿ ಪಡೆಯದ ಯಾವ ಮಗುವು ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು ಎಂದರು.

ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 99,828 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1374 ಕಠಿಣ ಪ್ರದೇಶಗಳನ್ನು (ಹೆಚ್‌ಆರ್‌ಎ) ಗುರುತಿಸಲಾಗಿದ್ದು, ಇವುಗಳ ಮೇಲೆ ಹೆಚ್ಚು ನಿಗಾವಹಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಯಾವುದೇ ಕಾರಣಕ್ಕೂ ಪೋಲಿಯೊ ಲಸಿಕೆಯಿಂದ ವಂಚಿತ ಆಗದಂತೆ ಕ್ರಮ ವಹಿಸಲಾಗಿದೆ.

ಎಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಹಾಗೂ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೊ ಲಸಿಕೆ ಹಾಕಲಾಗುವುದು. ಜಿಲ್ಲೆಯಾದ್ಯಂತ ಒಟ್ಟು 476 ಬೂತ್‌ಗಳ ಜೊತೆಗೆ 85 ಟ್ರಾನ್ಸಿಟ್ ತಂಡಗಳ ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳಿಗೆ ಲಸಿಕೆಯನ್ನು ಹಾಕಲು ಒಟ್ಟು 2,148 ಲಸಿಕಾದಾರರನ್ನು ನಿಯೋಜಿಸಲಾಗಿದೆ. ಇದರ ಮೇಲ್ವಿಚಾರಣೆಗಾಗಿ ಒಟ್ಟು 106 ಮೇಲ್ವಿಚಾರಕರನ್ನು ನೇಮಿಸಿದ್ದು. ಜಿಲ್ಲೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಒಟ್ಟು 2,80,986 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಲು ಗುರಿ ಹೊಂದಲಾಗಿದೆ ಎಂದರು.

Read More
Next Story