Karnataka Bandh | ಮಾ.22ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿದ ವಾಟಾಳ್‌ ನಾಗರಾಜ್‌
x
ವಾಟಾಳ್‌ ನಾಗರಾಜ್

Karnataka Bandh | ಮಾ.22ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿದ ವಾಟಾಳ್‌ ನಾಗರಾಜ್‌

ಪರಭಾಷೆಯವರು ತಮ್ಮದೇ ಭಾಷಾ ವ್ಯಾಮೋಹ ಹೊಂದಿದ್ದರೆ ನಮ್ಮ ರಾಜ್ಯದಿಂದ ಹೊರಗಡೆ ಹೋಗಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ವಾಟಾಳ್‌ ಹೇಳಿದ್ದಾರೆ.


ಬೆಳಗಾವಿಯಲ್ಲಿ ಕನ್ನಡದ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ, ಕನ್ನಡಿಗರ ಮೇಲೆ ಎಂಇಎಸ್ ಪುಂಡಾಟ‌ ಖಂಡಿಸಿ ಹಾಗೂ ಶಿವಸೇನೆ ನಾಯಕರು ಹಾಗೂ ಕಾರ್ಯಕರ್ತರು ಕರ್ನಾಟಕಕ್ಕೆ ಕಾಲಿಡದಂತೆ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಮಾ.22ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಮಾಡಬೇಕು. ಶಿವಸೇನೆ ಗಡಿಪಾರು ಮಾಡಬೇಕು. ಸಂಭಾಜಿ ಪ್ರತಿಮೆ ತೆರವುಗೊಳಿಸಬೇಕು. ಕಂಡಕ್ಟರ್ ಮೇಲಿನ ಹಲ್ಲೆಗೆ ಉನ್ನತ ಮಟ್ಟ ತನಿಖೆಯಾಗಬೇಕು. ಕೊಪ್ಪಳ ಕಾರ್ಖಾನೆಗಳಿಂದ ಪರಿಸರ ಹಾಳಾಗುತ್ತಿದ್ದು, ಇದಕ್ಕೆ ತಡೆ ನೀಡಬೇಕು. ಪರಭಾಷೆಯವರು ತಮ್ಮದೇ ಭಾಷಾ ವ್ಯಾಮೋಹ ಹೊಂದಿದ್ದರೆ ನಮ್ಮ ರಾಜ್ಯದಿಂದ ಹೊರಗಡೆ ಹೋಗಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮೂಲೆಗುಂಪಾಗಿದ್ದು, ಇದಕ್ಕೆ ಶಕ್ತಿ ತುಂಬಬೇಕು ಎಂದು ಆಗ್ರಹಿಸಿ ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದರು.

ಹಂತ ಹಂತವಾಗಿ ಪ್ರತಿಭಟನೆ

ಮಾರ್ಚ್ 3 - ಬೆಳಿಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ

ಮಾರ್ಚ್ 7 - ಬೆಳಗಾವಿ ಚಲೋ

ಮಾರ್ಚ್ 11 - ಅತ್ತಿಬೆಲೆ ತಮಿಳುನಾಡು ಗಡಿ ಬಂದ್

ಮಾರ್ಚ್ 14 - ಮಂಡ್ಯ ಮೈಸೂರು, ರಾಮನಗರ ರಾಷ್ಟ್ರೀಯ ಹೆದ್ದಾರಿ ಬಂದ್

ಮಾರ್ಚ್ 16 - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಬಂದ್

ಮಾರ್ಚ್ 22 - ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಅಖಂಡ ಕರ್ನಾಟಕ ಬಂದ್

ಬಂದ್‌ಗೆ ಸಿಎಂ ಬೆಂಬಲಿಸಲಿ

ಕರ್ನಾಟಕ ಬಂದ್ ಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾವು ಕಳಕಳಿಯಿಂದ ಮನವಿ ಮಾಡುತ್ತೇನೆ. ಇದು ರಾಜಕೀಯವಲ್ಲ, ಹಾಗಾಗಿ ಸಂಪೂರ್ಣ ಬೆಂಬಲ ನೀಡಬೇಕು‌. ರಾಮಲಿಂಗರೆಡ್ಡಿ ಅವರು ಸಾರಿಗೆ ಇಲಾಖೆಯ ಎಲ್ಲ ಬಸ್ಸುಗಳನ್ನು ನಿಲ್ಲಿಸಿ ಕೆಎಸ್‌ಆರ್‌ಟಿಸಿ ನೌಕರರ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲ ಸೂಚಿಸಬೇಕು. ಹೋಟೆಲ್, ಅಂಗಡಿ-ಮುಂಗಟ್ಟುಗಳು ಕೂಡ ಕರ್ನಾಟಕದ ಪ್ರತಿಷ್ಠೆಯ ಪ್ರಶ್ನೆಯಾದ ಈ ಬಂದ್ ಬೆಂಬಲ ನೀಡಬೇಕು ಎಂದು ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

Read More
Next Story