K.N. Rajanna should be punished for telling the truth about Congresss shortcomings: Vijayendra alleges
x

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ನಕಲಿ ಬೀಜ, ರಸಗೊಬ್ಬರ ಪೂರೈಸುವ ಕಂಪೆನಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ವಿಜಯೇಂದ್ರ ಆಗ್ರಹ

ರೈತರನ್ನು ವಂಚಿಸುವ ಕಂಪೆನಿ ಹಾಗೂ ಜಾಲಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಜಾಗೃತ ದಳವನ್ನು ರಚಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.


ರೈತರಿಗೆ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆ ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರನ್ನು ವಂಚಿಸುವ ಕಂಪೆನಿ ಹಾಗೂ ಜಾಲಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಜಾಗೃತ ದಳವನ್ನು ರಚಿಸಬೇಕು ಎಂದು ಸಲಹೆ ನೀಡಿದ್ದಾರೆ.

ದಾಸ್ತಾನಿದ್ದರೂ ರಾಜ್ಯದ ವಿವಿಧ ಭಾಗಗಳಲ್ಲಿ ಯೂರಿಯಾದ ಕೃತಕ ಅಭಾವ ಸೃಷಿಸಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ಬೇಜಬ್ದಾರಿತನವೂ ಕಾರಣ. ಇದು ರೈತರಲ್ಲಿ ಭಯ ಹುಟ್ಟಿಸಿದೆ. ಸರ್ಕಾರದ ಅಸಮರ್ಪಕ ನಿರ್ವಹಣೆ ವಿರುದ್ಧ ಬಿಜೆಪಿ ರೈತ ಘಟಕ ಸೋಮವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ.

ಅನ್ನದಾತನನ್ನು ಸಂಕಷ್ಟಕ್ಕೀಡು ಮಾಡುವ ಹಾಗೂ ಶೋಷಣೆಗೊಳಪಡಿಸುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಲೇ ಇದೆ. ಈ ಬಾರಿ ಆಶಾದಾಯಕ ಮುಂಗಾರಿನ ಹಿನ್ನೆಲೆಯಲ್ಲಿ ಉತ್ತಮ ಬೆಳೆ ಬೆಳೆಯುವ ಉತ್ಸಾಹದಲ್ಲಿರುವ ರೈತ ಸಮುದಾಯವನ್ನು ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಸುವ ಕಂಪನಿಗಳು ನಕಲಿ ಬೀಜಗಳನ್ನು ಪೂರೈಸುವ ಮೂಲಕ ಕೃಷಿ ಚಟುವಟಿಕೆಯನ್ನು ನಿಷ್ಕ್ರಿಯಗೊಳಿಸುವ ಕೃತ್ಯದಲ್ಲಿ ತೊಡಗಿರುವುದು ಅತ್ಯಂತ ಹೇಯ ಎಂದು ಅಸಮಾಧಾನ ಹೊರಹಾಕಿದ್ದಾರೆ.

ರೈತ ಸಮುದಾಯಕ್ಕೆ ಯಾವುದೇ ತೊಂದರೆ ಭಾದಿಸದಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಕರ್ತವ್ಯ. ಸಕಾಲದಲ್ಲಿ ರೈತಸಮೂಹಕ್ಕೆ ಗುಣಮಟ್ಟದ ಬಿತ್ತನೆ ಬೀಜ, ಅಗತ್ಯ ರಸಗೊಬ್ಬರ ದೊರಕಲು ಸಾಧ್ಯವಿರುವ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

Read More
Next Story