Good news for engineers and diploma graduates, applications invited for several positions in the Water Board
x
ಸಾಂದರ್ಭಿಕ ಚಿತ್ರ

ಬಿಇ, ಡಿಪ್ಲೊಮಾ ಪದವಿಧರರಿಗೆ ಸಿಹಿಸುದ್ದಿ: ಜಲಮಂಡಳಿಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು ಎಂದು ತಿಳಿಸಿದೆ.


Click the Play button to hear this message in audio format

ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಲ್ಲಿ ಖಾಲಿಯಿರುವ ಸಹಾಯಕ ಎಂಜಿನಿಯರ್‌ ಹಾಗೂ ಕಿರಿಯ ಎಂಜಿನಿಯರ್‌ ಸೇರಿದಂತೆ ವಿವಿಧ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ನ.25 ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು ಎಂದು ತಿಳಿಸಿದೆ.

ಯಾವ್ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರೂಪ್‌ ʼಬಿʼ ವೃಂದದ ಸಹಾಯಕ ಎಂಜಿನಿಯರ್‌ (ಸಿವಿಲ್‌, ಎಲೆಕ್ಟ್ರಿಕಲ್‌, ಮೆಕ್ಯಾನಿಕಲ್‌ ಹಾಗೂ ಕಂಪ್ಯೂಟರ್‌ ಸೈನ್ಸ್‌ ವಿಭಾಗ) 20 ಹುದ್ದೆಗಳು, ಗ್ರೂಪ್‌ ʼಸಿʼ ವೃಂದದ ಕಿರಿಯ ಎಂಜಿನಿಯರ್‌ (ಸಿವಿಲ್‌, ಎಲೆಕ್ಟ್ರಿಕಲ್‌ ಹಾಗೂ ಮೆಕ್ಯಾನಿಕಲ್‌) 31 ಹುದ್ದೆ, ಗ್ರೂಪ್‌ ʼಸಿʼ ವೃಂದದ ಸಹಾಯಕ, ಕಿರಿಯ ಸಹಾಯಕ, ಮಾಪನ ಓದುಗ ಹಾಗೂ ಎರಡನೇ ದರ್ಜೆ ಉಗ್ರಾಣ ಪಾಲಕ 94 ಹುದ್ದೆಗಳು, 45 ಹಿಂಬಾಕಿ ಹುದ್ದೆಗಳು ಸೇರಿದಂತೆ ಒಟ್ಟು 165 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ ಮತ್ತು ವೇತನ

ಗ್ರೂಪ್‌ ʼಬಿʼ ವೃಂದದ ಸಹಾಯಕ ಎಂಜಿನಿಯರ್‌ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಸಂಬಂಧಪಟ್ಟ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಗ್ರೂಪ್‌ ʼಸಿʼ ವೃಂದದ ಕಿರಿಯ ಎಂಜಿನಿಯರ್‌ ಹುದ್ದೆಗೆ ಸಂಬಂಧಪಟ್ಟ ವಿಭಾಗದಲ್ಲಿ ಮೂರು ವರ್ಷದ ಡಿಪ್ಲೊಮಾ ಪದವಿ ಪಡೆದಿರಬೇಕು. ಸಹಾಯಕ ಹುದ್ದೆಗೆ ಕಲೆ, ವಾಣಿಜ್ಯ ಅಥವಾ ವಿಜ್ಞಾನ ವಿಷಯದಲ್ಲಿ ಪದವಿ ಪಡೆದಿರಬೇಕು. ಕಿರಿಯ ಸಹಾಯಕ, ಮಾಪನ ಓದುಗ ಹಾಗೂ ಎರಡನೇ ದರ್ಜೆ ಉಗ್ರಾಣಪಾಲಕ ಹುದ್ದೆಗೆ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು.

ಗ್ರೂಪ್‌ ʼಬಿʼ ದರ್ಜೆಯ ಹುದ್ದೆಗಳಿಗೆ 53,250 ರೂ, ಗ್ರೂಪ್‌ ʼಸಿʼ ಹುದ್ದೆಗಳಿಗೆ 39,170 ರೂ, ಕಿರಿಯ ಸಹಾಯಕ, ಮಾಪನ ಓದುಗ ಹಾಗೂ ಎರಡನೇ ದರ್ಜೆ ಉಗ್ರಾಣಪಾಲಕ ಹುದ್ದೆಗೆ 27,750 ರೂ. ನಿಗದಿಪಡಿಸಿದೆ.

ವಯೋಮಿತಿ

ರಾಜ್ಯ ಸರ್ಕಾರ ಆದೇಶದಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ಮಿತಿಯಲ್ಲಿ 3 ವರ್ಷ ಸಡಿಲಿಕೆಯನ್ನು ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷ, ಪ್ರವರ್ಗ 2ಎ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ವಿದ್ಯಾರ್ಥಿಗಳಿಗೆ 43 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ , ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 750 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಮಾಜಿ ಸೈನಿಕ ಮತ್ತು ತೃತೀಯ ಲಿಂಗಿಗಳಿಗೆ 500 ರೂ, ವಿಶೇಷ ಚೇತನ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ಪಾವತಿಸಬೇಕಾಗಿದೆ.

Read More
Next Story