The Federal Interview: ಎನ್‌ಪಿಎಸ್‌ ಬೇಡ, ಒಪಿಎಸ್‌ ಇರಲಿ ಎಂದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ
x
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ

The Federal Interview: ಎನ್‌ಪಿಎಸ್‌ ಬೇಡ, ಒಪಿಎಸ್‌ ಇರಲಿ ಎಂದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ

ಎನ್​ಪಿಎಸ್ ಹಾಗೂ ಯುಪಿಎಸ್​ ಈ ಎರಡೂ ಯೋಜನೆಗಳಿಗೆ ನಮ್ಮ ವಿರೋಧವಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು 'ದ ಫೆಡರಲ್ ಕರ್ನಾಟಕ'ಕ್ಕೆ ಕೊಟ್ಟಿರುವ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ


ರಾಜ್ಯದಲ್ಲಿ ಸರ್ಕಾರಿ ನೌಕರರು ರಾಷ್ಟ್ರೀಯ ಪಿಂಚಣಿ ಯೋಜನೆ (NPS) ವ್ಯವಸ್ಥೆಗೆ ವಿರೋಧ ಇರುವಾಗಲೇ, ಈಗ ಹೊಸ ಏಕೀಕೃತ ಪಿಂಚಣಿ ಯೋಜನೆ (UPS) ಗುಮ್ಮ ಸರ್ಕಾರಿ ನೌಕರರಿಗೆ ಎದುರಾಗಿದೆ.

ಈ ಹೊಸ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ ಏಪ್ರಿಲ್ 1, 2025ರಿಂದ ಜಾರಿ ಮಾಡಲಿದೆ. ಎನ್​ಪಿಎಸ್ ಹಾಗೂ ಯುಪಿಎಸ್​ ಈ ಎರಡೂ ಯೋಜನೆಗಳಿಗೆ ನಮ್ಮ ವಿರೋಧವಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು 'ದ ಫೆಡರಲ್ ಕರ್ನಾಟಕ'ಕ್ಕೆ ಕೊಟ್ಟಿರುವ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ(ಎನ್‌ಪಿಎಸ್‌) ಈಗಾಗಲೇ ವಿರೋಧ ವ್ಯಕ್ತವಾಗಿದೆ. ಆರಂಭದಲ್ಲಿ ಎನ್​ಪಿಎಸ್​ಗೆ ಸರ್ಕಾರಿ ನೌಕರರು ತಮ್ಮ ಬೆಂಬಲ ಕೊಟ್ಟಿದ್ದರು. ಆದರೆ ಅದರ ಫಲಿತಾಂಶ ತಿಳಿದ ನಂತರ ಅದನ್ನು ವಿರೋಧಿಸುತ್ತಿದ್ದಾರೆ. ನಾವೂ ಕೂಡ ಎನ್​ಪಿಎಸ್​ಗೆ ವಿರೋಧವಾಗಿದ್ದು ರಾಜ್ಯ ಸರ್ಕಾರದ ಎದುರು ನಮ್ಮ ಬೇಡಿಕೆ ಇಟ್ಟಿದ್ದೇವೆ. ಅದಕ್ಕೆ ಈಗಾಗಲೇ ಸಮಿತಿಯನ್ನು ಸರ್ಕಾರ ನೇಮಕ ಮಾಡಿದೆ. ಸಮಿತಿ ವರದಿ ಕೊಟ್ಟ ಬಳಿಕ ರಾಜ್ಯ ಸರ್ಕಾರ ಒಪಿಎಸ್​ ಕುರಿತು ತೀರ್ಮಾನ ಮಾಡಲಿದೆ ಎಂದು ಷಡಾಕ್ಷರಿ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. "ಹಳೆಯ ಪಿಂಚಣಿ ಯೋಜನೆಯೇ (ಒಪಿಎಸ್‌) ಇರಲಿ," ಎಂದವರು ಆಗ್ರಹಿಸಿದ್ದಾರೆ.

ಬೇರೆ ಸಂಘಗಳ ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದು ಎನ್​ಪಿಎಸ್​​ ರಾಜ್ಯ ಸರ್ಕಾರಿ ನೌಕರರ ಸಂಘಟದ ಹೋರಾಟದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕ್ಯಾಶ್ ಲೆಸ್ ಆರೋಗ್ಯ ವಿಮೆಯ ಕುರಿತು ಮಾತನಾಡಿ, ಬರುವ ಫೆ.20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆಯಿದೆ. ಆಗ ಅವರು ಕ್ಯಾಶ್ ಲೆಸ್ ಆರೋಗ್ಯ ವಿಮೆಯ ಕುರಿತು ಸರ್ಕಾರದ ಆದೇಶವನ್ನು ಪ್ರಕಟಿಸುವ ಸಾಧ್ಯತೆಯೂ ಇದೆ ಎಂಬ ಭರವಸೆಯನ್ನು ವ್ಯಕ್ತ ಪಡಿಸಿದ್ದಾರೆ.

ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ತಾವು ಕೊಟ್ಟಿರುವ ಭರವಸೆಗಳನ್ನು ಸರ್ಕಾರದ ಗಮನಕ್ಕೆ ತರುವ ಮೂಲಕ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಾಕ್ಷರಿ ವಿವರಿಸಿದರು.

ಸಿ.ಎಸ್‌. ಷಡಾಕ್ಷರಿ ಅವರ ಸ್ಪಷ್ಟ ನಿಲುವು, ಅವರು ನೀಡಿದ ಈ ಸಂದರ್ಶನದಲ್ಲಿ ವಿಸ್ತೃತವಾಗಿ ಮೂಡಿಬಂದಿದೆ.



Read More
Next Story