Weather Updates ಕರ್ನಾಟಕದಲ್ಲಿ ಬಿಸಿಲ ಧಗೆ, ಯಾವಾಗ ಇಳಿಯುತ್ತೆ ?
x

Weather Updates ಕರ್ನಾಟಕದಲ್ಲಿ ಬಿಸಿಲ ಧಗೆ, ಯಾವಾಗ ಇಳಿಯುತ್ತೆ ?

ಸಾಮಾನ್ಯಕ್ಕಿಂತ 2ರಿಂದ 3 ಪಟ್ಟು ಬಿಸಿಲು ಹೆಚ್ಚಳ


ರಾಜ್ಯದಲ್ಲಿ ಬರಗಾಲವಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇದೀಗ ಹವಾಮಾನ ವೈಪರೀತ್ಯದ ಕಾವು ಎಲ್ಲರಿಗೂ ಮುಟ್ಟುತ್ತಿದೆ.

ಕಳೆದ ಒಂದುವಾರದಿಂದ ರಾಜ್ಯದಲ್ಲಿ ಬಿಸಿಲಿನ ಧಗೆ ಹೆಚ್ಚಾಗುತ್ತಿದ್ದು, ಜನರನ್ನು ಹೈರಾಣಾಗಿಸಿದೆ. ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲ್ಲೇ ಇದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣವು ಸಾಮಾನ್ಯಕ್ಕಿಂತ 2ರಿಂದ 3 ಪಟ್ಟು ಹೆಚ್ಚಾಗುತ್ತಿದೆ.

ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಸರ್ಮಪಕವಾಗಿ ಮಳೆಯಾಗಿಲ್ಲ. ಹಿಂಗಾರು ಹಾಗೂ ಮುಂಗಾರು ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಈಗಾಗಲೇ ಉಷ್ಣಾಂಶ ಪ್ರಮಾಣ ಸಾಮಾನ್ಯಕ್ಕಿಂತಲೂ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ಭೂಮಿಯಲ್ಲಿ ತೇವಾಂಶ ಪ್ರಮಾಣ ಇಳಿಕೆಯಾಗಿದೆ. ಇದು ಸಹ ಬಿಸಿಲು ಹಾಗೂ ಸೆಖೆ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ವಿವಿಧ ಭಾಗದಲ್ಲಿ ವಾಡಿಕೆಗಿಂತ 2ರಿಂದ ಮೂರು ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಹೆಚ್ಚಳವಾಗಿದೆ.

ಕರ್ನಾಟಕದಲ್ಲಿ ಮಳೆ ಆಗುವವರೆಗೂ ಬಿಸಿಲಿನ ಧಗೆ ಇದೇ ರೀತಿ ಮುಂದುವರಿಯುವ ಸಾಧ್ಯತೆ ಇದೆ. ಇದಕ್ಕಿಂತ ಹೆಚ್ಚು ಉಷ್ಣಾಂಶ ಇರುವುದಿಲ್ಲ.

ಇನ್ನೊಂದು ಎರಡು ಮೂರು ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಇಳಿಕೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಎರಡು ದಿನ ಹೇಗಿರಲಿದೆ ಹವಾಮಾನ ?

ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಒಣಹವೆ ಮುಂದುವರಿಯುಲಿದ್ದು, ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 14.6 ಡಿಗ್ರಿ ಸೆಲ್ಸಿಯಸ್‌ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ.

ಇನ್ನು ಗುರುವಾರವು ಸಹ ರಾಜ್ಯದಲ್ಲಿ ಒಣಹವೆ ಮುಂದುವರಿದಿತ್ತು.

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ ?

ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ.

ಇನ್ನುಳಿದಂತೆ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More
Next Story