
ಸಾಂದರ್ಭಿಕ ಚಿತ್ರ
ವೈಟ್ ಟಾಪಿಂಗ್ ಕಾಮಗಾರಿ; ಈ ರಸ್ತೆಯಲ್ಲಿ 21 ದಿನ ವಾಹನ ಸಂಚಾರ ನಿರ್ಬಂಧ, ಯಾವುದು ಆ ರಸ್ತೆ ?
ಶುಕ್ರವಾರದಿಂದ (ಸೆ.10 ರಿಂದ 21ರವರೆಗೆ) 21 ದಿನಗಳ ಕಾಲ ಸಾರ್ವಜನಿಕರು ಮತ್ತು ವಾಹನ ಸವಾರರು ಪರ್ಯಾಯ ರಸ್ತೆಯಲ್ಲಿ ಸಂಚರಿಸುವಂತೆ ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದ ಹೆಚ್‌ಎಎಲ್ ಏರ್‌ಪೋರ್ಟ್ ವ್ಯಾಪ್ತಿಯ ಪಣತ್ತೂರು ಮುಖ್ಯ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಇಂದಿನಿಂದ 21 ದಿನಗಳವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿದೆ. ವಾಹನ ಸವಾರರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ.
ಪಣತ್ತೂರು ಮುಖ್ಯರಸ್ತೆಯ ಪಣತ್ತೂರು ರೈಲ್ವೆ ಬ್ರಿಡ್ಜ್ ಜಂಕ್ಷನ್‌ನಿಂದ ಬೋಗನಹಳ್ಳಿ ಜಂಕ್ಷನ್‌ವರೆಗೆ ಎರಡು ಬದಿಯ ಸಂಚಾರವನ್ನು ಶುಕ್ರವಾರದಿಂದ (ಸೆ.10 ರಿಂದ 21ರವರೆಗೆ) 21 ದಿನಗಳ ಕಾಲ ನಿರ್ಬಂಧಿಸಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.
ಪರ್ಯಾಯ ಮಾರ್ಗ ಯಾವುದು?
ವೈಟ್‌ಫೀಲ್ಡ್ ಮತ್ತು ವರ್ತೂರು ಕಡೆಯಿಂದ ಪಣತ್ತೂರು ಮುಖ್ಯರಸ್ತೆಯ ಮುಖಾಂತರ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಚಲಿಸುವ ವಾಹನಗಳು ಬಳಗೆರೆ ಟಿ.ಜಂಕ್ಷನ್ ಹತ್ತಿರ ಬಲ ತಿರುವು ಪಡೆದು, ವಿಬ್ ಗಯಾರ್ ರಸ್ತೆಯ ಮುಖಾಂತರ ವರ್ತೂರು ಮುಖ್ಯರಸ್ತೆ ಕಡೆಗೆ ಸಂಚರಿಸಿ ಮಾರತ್ತಹಳ್ಳಿ ಬ್ರಿಡ್ಜ್ ಹತ್ತಿರ ಎಡ ತಿರುವು ಪಡೆದು, ಹೊರ ವರ್ತುಲ ರಸ್ತೆ ತಲುಪಿ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸಬಹುದಾಗಿದೆ.
ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಯಿಂದ ಪಣತ್ತೂರು ಮುಖ್ಯ ರಸ್ತೆಯ ಮುಖಾಂತರ ವರ್ತೂರು ಮತ್ತು ವೈಟ್‌ಫೀಲ್ಡ್ ಕಡೆಗೆ ಸಂಚರಿಸುವ ವಾಹನಗಳು ಹೊರ ವರ್ತುಲ ರಸ್ತೆಯ ಮುಖಾಂತರ ಮಾರತ್ತಹಳ್ಳಿ ಬ್ರಿಡ್ಜ್ ಕಡೆ ಸಂಚರಿಸಿ ವರ್ತೂರು ಮುಖ್ಯರಸ್ತೆ ತಲುಪಿ ವರ್ತೂರು ಮತ್ತು ವೈಟ್‌ಫೀಲ್ಡ್ ಕಡೆಗೆ ಸಂಚರಿಸಬಹುದಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಬೆಂಗಳೂರು ನಗರ ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ಐಪಿಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.