ಅಧಿಕಾರಿಗಳೇ ಹಗರಣ ಮಾಡಿದ್ದರೆ ನಾಗೇಂದ್ರ ರಾಜೀನಾಮೆ ಯಾಕೆ; ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ಪ್ರಶ್ನೆ
x
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಅಧಿಕಾರಿಗಳೇ ಹಗರಣ ಮಾಡಿದ್ದರೆ ನಾಗೇಂದ್ರ ರಾಜೀನಾಮೆ ಯಾಕೆ; ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ಪ್ರಶ್ನೆ

ಹಗರಣ ನಡೆದಿರುವುದನ್ನು ಸಿಎಂ ಸಿದ್ದರಾಮಯ್ಯ ಸದನದಲ್ಲೇ ಒಪ್ಪಿಕೊಂಡಿದ್ದಾರೆ. ಅಧಿಕಾರಿಗಳೇ ಹಗರಣ ಮಾಡಿದ್ದಾರೆ ಎನ್ನುತ್ತಿದ್ದಾರೆ. ಹಾಗಾದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡುವಂತೆ ಹೇಳಿದ್ದೇಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಶ್ನಿಸಿದರು.


Click the Play button to hear this message in audio format

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ,ನಾಗೇಂದ್ರ ಹಾಗೂ ಬಸನಗೌಡ ದದ್ದಲ್​ರನ್ನು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಗರಣ ನಡೆದಿರುವುದನ್ನು ಸಿಎಂ ಸಿದ್ದರಾಮಯ್ಯ ಸದನದಲ್ಲೇ ಒಪ್ಪಿಕೊಂಡಿದ್ದಾರೆ. ಅಧಿಕಾರಿಗಳೇ ಹಗರಣ ಮಾಡಿದ್ದಾರೆ ಎನ್ನುತ್ತಿದ್ದಾರೆ. ಹಾಗಾದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡುವಂತೆ ಹೇಳಿದ್ದೇಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಶ್ನಿಸಿದರು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಹಾಗೂ ಬಸನಗೌಡ ದದ್ದಲ್​ರನ್ನು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

'ವಾಲ್ಮೀಕಿ ನಿಗಮದಲ್ಲಿನ ಹಗರಣದ ಬಗ್ಗೆ ಪ್ರಶ್ನೆ ಮಾಡಿದರೆ, ಬಿಜೆಪಿ ಅವಧಿಯ ಹಗರಣಗಳನ್ನು ತನಿಖೆ ಮಾಡುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಮುಖ್ಯಮಂತ್ರಿಗಳ ಪಾಪದ ಕೊಡ ತುಂಬಿದೆ' ಸಿದ್ದರಾಮಯ್ಯ ಅವರ ವಿರುದ್ದ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಾಗೇಂದ್ರ ಬಾಯಿ ಬಿಟ್ಟರೆ ಹಗರಣಗಳ ಮೂಲ ಸಿಎಂ ಹಾಗೂ ಡಿಸಿಎಂ ಬುಡಕ್ಕೆ ಬರುತ್ತದೆ. ಸದನದ ನಡುವೆಯೂ‌ ಪತ್ರಿಕಾಗೋಷ್ಠಿ ಮಾಡಿ ತಮ್ಮನ್ನು ತಾವೇ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುತ್ತಾರೆ. ಈ ಹಗರಣಕ್ಕೂ ಹಣಕಾಸಿನ ಇಲಾಖೆ ಸಂಬಂಧ ಇಲ್ಲ ಎಂದು ಅವರು ಹೇಳುತ್ತಾರೆ. ಸಂಬಂಧ ಇದೆ ಅಂದರೆ ಸಿಎಂ ಬುಡಕ್ಕೇ ಬರುತ್ತದೆ. ಯಾವುದೇ ರಾಜ್ಯದ ಸಿಎಂ ಅಸಮರ್ಥ ಇದ್ದರೆ ಅಧಿಕಾರಿಗಳು ದುರುಪಯೋಗ ಮಾಡಿಕೊಳ್ಳುತ್ತಾರೆ ಎಂದು ಅವರು ಟೀಕಿಸಿದರು.

Read More
Next Story