RAPE AND MURDER| ಅತ್ಯಾಚಾರಗೈದು ಮಹಿಳೆಯ ಕೊಲೆ
RAPE AND MURDER| ಮಹಿಳೆಯ ಮೃತದೇಹ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಸ್ಥಿತಿಯಲ್ಲಿ ಕಲ್ಕೆರೆ ಲೇಕ್ ಬಳಿಯ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.
ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಆಕೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
28 ವರ್ಷದ ನಜ್ಮಾ ಎಂಬವರು ಕೊಲೆಯಾದ ಮಹಿಳೆ. ಮಹಿಳೆಯ ಮೃತದೇಹ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಸ್ಥಿತಿಯಲ್ಲಿ ಕಲ್ಕೆರೆ ಲೇಕ್ ಬಳಿಯ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ನಜ್ಮಾ ಕಲ್ಕೆರೆಯ ಅಪಾರ್ಟ್‌ಮೆಂಟ್‌ನಲ್ಲಿ ಮನೆ ಕೆಲಸ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೆ ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚಿನ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಇತ್ತೀಚೆಗೆ ನಗರದ ಕೆ.ಆರ್ ಮಾರ್ಕೆಟ್ ಬಳಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿರುವ ಘಟನೆ ವರದಿಯಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.