Yeshwanthpur Ticket Sparks Clash Ahead of Polls: JD(S) Slams BJP Over BSP Claim
x

ಬಿಜೆಪಿ ಮುಖಂಡ ರುದ್ರೇಶ್‌ ಹಾಗೂ ಜೆಡಿಎಸ್‌ ಎಂಎಲ್‌ಸಿ ಜವರಾಯಿಗೌಡ

ಯಶವಂತಪುರ ಟಿಕೆಟ್ ಫೈಟ್: ಯಡಿಯೂರಪ್ಪ ಹೇಳಿಕೆಗೆ ಜೆಡಿಎಸ್‌ ತೀವ್ರ ಆಕ್ಷೇಪ

ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿಗೌಡ, "ಮುಂಬರುವ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರಕ್ಕೆ ನಾನೇ ಜೆಡಿಎಸ್ ಅಭ್ಯರ್ಥಿ. ನಾನೇಕೆ ಕ್ಷೇತ್ರವನ್ನು ಬಿಟ್ಟುಕೊಡಬೇಕು?" ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.


ಮುಂಬರುವ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮೊದಲೇ, ಎನ್‌ಡಿಎ ಮೈತ್ರಿಕೂಟದಲ್ಲಿ ಕ್ಷೇತ್ರ ಹಂಚಿಕೆ ಕುರಿತು ಭಿನ್ನಮತ ಸ್ಫೋಟಗೊಂಡಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಆಪ್ತ ಎಂ. ರುದ್ರೇಶ್ ಅವರೇ ಬಿಜೆಪಿ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಏಕಪಕ್ಷೀಯವಾಗಿ ಘೋಷಿಸಿರುವುದು ಜೆಡಿಎಸ್ ನಾಯಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಯಡಿಯೂರಪ್ಪ ಅವರು ಈ ಘೋಷಣೆ ಮಾಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಹಾಗೂ ಯಶವಂತಪುರ ಕ್ಷೇತ್ರದ ಪ್ರಬಲ ಆಕಾಂಕ್ಷಿ ಟಿ.ಎನ್. ಜವರಾಯಿಗೌಡ, "ಮುಂಬರುವ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರಕ್ಕೆ ನಾನೇ ಜೆಡಿಎಸ್ ಅಭ್ಯರ್ಥಿ. ನಾನೇಕೆ ಕ್ಷೇತ್ರವನ್ನು ಬಿಟ್ಟುಕೊಡಬೇಕು?" ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹಿರಿಯರಾದ ಯಡಿಯೂರಪ್ಪ ಅವರು ಜೆಡಿಎಸ್ ನಾಯಕರನ್ನು ಸಂಪರ್ಕಿಸದೆ, ಏಕಾಏಕಿ ಅಭ್ಯರ್ಥಿಯನ್ನು ಘೋಷಿಸಿರುವುದು ದುಡುಕಿನ ನಿರ್ಧಾರ. ಅವರ ಈ ಹೇಳಿಕೆಯಿಂದ ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದು, ಇದು ಎನ್‌ಡಿಎ ಮೈತ್ರಿಕೂಟದ ಸಾಮರಸ್ಯಕ್ಕೆ ಧಕ್ಕೆ ತಂದಿದೆ," ಎಂದು ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆಯು ಮೈತ್ರಿ ಪಕ್ಷಗಳ ನಡುವಿನ ಸೀಟು ಹಂಚಿಕೆ ಮಾತುಕತೆ ಸುಲಭವಾಗಿರುವುದಿಲ್ಲ ಎಂಬುದರ ಮುನ್ಸೂಚನೆ ನೀಡಿದೆ.

Read More
Next Story