ಏನನ್ನೂ ಕೊಡದೆ, ಅನ್ಯಾಯವಾಗಿಲ್ಲ ಎಂದರೆ ಏನರ್ಥ ನಿರ್ಮಲಾ ಸೀತಾರಾಮನ್?‌ ಸಿಎಂ ಸಿದ್ದರಾಮಯ್ಯ ಪ್ರಶ್ನೆ
x

ಏನನ್ನೂ ಕೊಡದೆ, ಅನ್ಯಾಯವಾಗಿಲ್ಲ ಎಂದರೆ ಏನರ್ಥ ನಿರ್ಮಲಾ ಸೀತಾರಾಮನ್?‌ ಸಿಎಂ ಸಿದ್ದರಾಮಯ್ಯ ಪ್ರಶ್ನೆ

"ರಾಜ್ಯಕ್ಕೆ ಏನನ್ನೂ ಕೊಡದೆ, ಅನ್ಯಾಯವಾಗಿಲ್ಲ ಎಂದರೆ ಏನರ್ಥ ನಿರ್ಮಲಾ ಸೀತಾರಾಮನ್‌ ಅವರೇ.." ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ತರಾಟೆಗೆ ತೆಗೆದುಕೊಂಡರು.


"ರಾಜ್ಯಕ್ಕೆ ಏನನ್ನೂ ಕೊಡದೆ, ಅನ್ಯಾಯವಾಗಿಲ್ಲ ಎಂದರೆ ಏನರ್ಥ ನಿರ್ಮಲಾ ಸೀತಾರಾಮನ್‌ ಅವರೇ.." ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ(ಜು.29) ಜಲಾಶಯಕ್ಕೆ ಬಾಗಿನ ಅರ್ಪಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ʻʻಬಜೆಟ್ ಸಮಾಲೋಚನೆ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಆದರೆ ಬಜೆಟ್ ನಲ್ಲಿ ಆ ಬಗ್ಗೆ ಪ್ರಸ್ತಾಪವೇ ಇಲ್ಲ. 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5495 ಕೋಟಿ ರೂ. ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಬೆಂಗಳೂರು ಫೆರಿಫೆರಲ್ ರಿಂಗ್ ರೋಡ್ ಗೆ 3000 ಕೋಟಿ ರೂ. ಕೊಡುವುದಾಗಿ ಹೇಳಿದ್ದರು. ಅದೂ ಇಲ್ಲ. ಕೆರೆಗಳ ಅಭಿವೃದ್ಧಿಗೆ 3000ಕೋಟಿ ಕೊಡುವುದಾಗಿ ಹೇಳಿದ್ದರು, ಅದೂ ಕೂಡ ಬಜೆಟ್ ನಲ್ಲಿ ಇಲ್ಲ... ಇದೆಲ್ಲಾ ಅನ್ಯಾಯವಲ್ಲವೇ? ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದೀರಿ. ಕರ್ನಾಟಕಕ್ಕೆ ಏನು ಕೊಟ್ಟಿದ್ದೀರಿ ಹೇಳಿ?ʼʼ ಎಂದು ಕೇಂದ್ರ ಸಚಿವರನ್ನು ಪ್ರಶ್ನಿಸಿದರು.

ʻʻಎಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಕೊಡಬೇಕಿದ್ದ ಅನುದಾನವನ್ನು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸ ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು ಯೋಜನೆಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು. ಅದೂ ಕೂಡ ಆಗಿಲ್ಲ. ಹೀಗಿದ್ದರೂ, ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು, ಈಗಲೂ ಸುಳ್ಳು ಹೇಳಿದ್ದಾರೆʼʼ ಸಿದ್ದರಾಮಯ್ಯ ಟೀಕಿಸಿದರು.

ʻʻ15ನೇ ಹಣಕಾಸು ಯೋಜನೆಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿರುವ ನಿರ್ಮಲಾ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ. ಆದರೆ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ, ಕಾರ್ಯಕ್ರಮಗಳಿಂದಾಗಿ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಶೇ.31ರಷ್ಟು ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2 ನೇ ಸ್ಥಾನದಲ್ಲಿದೆ. ಇನ್ನೇನು ಕೊಡುಗೆ ಕೊಡಬೇಕು?ʼʼ ಎಂದು ಪ್ರಶ್ನಿಸಿದರು.

ʻʻಕೇಂದ್ರದ ಧೋರಣೆಯಿಂದಾಗಿ ನಾವು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿದೆವು. ತಮಿಳುನಾಡು, ತೆಲಂಗಾಣ ಹಾಗೂ ಬಿಜೆಪಿ ವಿರುದ್ಧವಾಗಿರುವ ಅನೇಕ ರಾಜ್ಯಗಳೂ ಸಭೆಗೆ ಹೋಗಿಲ್ಲ. ಮಮತಾ ಬ್ಯಾನರ್ಜಿ ಅವರು ಸಭೆಗೆ ಹಾಜರಾಗಿ ಮಾತನಾಡಲು ಸಮಯ ನೀಡಿಲ್ಲ ಎಂದು ಸಭೆಯಿಂದ ಹೊರನಡೆದರು. ಇಂಥವರು ನಮಗೆ ಪಾಠ ಹೇಳಿಕೊಡುತ್ತಾರೆ. ಇವರ ತಪ್ಪುಗಳಿಂದಾಗಿ ಇಂದು ದೇಶದಲ್ಲಿ ಹೂಡಿಕೆಯಾಗುತ್ತಿಲ್ಲ. ನಾವು ಸಾಲ ಹೆಚ್ಚು ಮಾಡಿದ್ದೇವೆ ಎನ್ನುತ್ತಾರೆ. ನಾವು ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ಜಿಡಿಪಿಯ ಶೇ 25% ರೊಳಗೇ ಇದ್ದೇವೆ. ಅವರು ಸುಮಾರು 15 ಲಕ್ಷ ಕೋಟಿ ಸಾಲ ಮಾಡಿದ್ದಾರೆʼʼ ಎಂದರು.

"ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ ಭ್ರಷ್ಟ ರಾಜ್ಯ ಎಂದು ಅವರು ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದಮೇಲೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತಿದೆ" ಎಂದು ಸಿಎಂ ಹೇಳಿದರು.

Read More
Next Story