ಉಡುಪಿ : ಮನೆಗೆ ನುಗ್ಗಿ ಪತ್ನಿ-ಮಗುವಿನ ಎದುರೇ ವ್ಯಕ್ತಿಯ ಬರ್ಬರ ಹತ್ಯೆ
x

ಸಾಂದರ್ಭಿಕ ಚಿತ್ರ

ಉಡುಪಿ : ಮನೆಗೆ ನುಗ್ಗಿ ಪತ್ನಿ-ಮಗುವಿನ ಎದುರೇ ವ್ಯಕ್ತಿಯ ಬರ್ಬರ ಹತ್ಯೆ

ಉಡುಪಿ ಪುತ್ತೂರಿನಲ್ಲಿ ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವಿನಯ್​ ದೇವಾಡಿಗ (35) ಎಂಬ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆಗೈದಿದ್ದಾರೆ.


ಉಡುಪಿ ಜಿಲ್ಲೆಯ ಪುತ್ತೂರಿನಲ್ಲಿ ತಡರಾತ್ರಿ ವ್ಯಕ್ತಿಯನ್ನು ಆತನ ಪತ್ನಿ, ಮಗುವಿನ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಉಡುಪಿ ಪುತ್ತೂರಿನಲ್ಲಿ ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವಿನಯ್​ ದೇವಾಡಿಗ (35) ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ರಾತ್ರಿ ಬಾಗಿಲು ಬಡಿದ ದುಷ್ಕರ್ಮಿಗಳು ಮೊದಲು ಮನೆಯಲ್ಲಿ ವಿನಯ್ ಇದ್ದಾನಾ ಎಂದು ವಿಚಾರಿಸಿದ್ದಾರೆ. ಸ್ನೇಹಿತರು ಇರಬಹುದು ಎಂದು ಭಾವಿಸಿ ಒಳಗೆ ಇದ್ದಾರೆ ಎಂದು ಗೃಹಿಣಿ ಬಾಗಿಲು ತೆರೆದಿದ್ದಾರೆ. ಒಳಗೆ ಬಂದವರೇ ಏಕಾಏಕಿ ವಿನಯ್​ ರೂಮಿಗೆ ನುಗ್ಗಿ, ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ.

ಪತಿಯನ್ನು ರಕ್ಷಿಸಲು ಪ್ರಯತ್ನಿಸಿದ ವಿನಯ್ ಪತ್ನಿಗೆ ಸಹ ಗಂಭೀರ ಗಾಯಗಳಾಗಿವೆ. ಘಟನೆಯ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More
Next Story