
January 17 News Live: ಇಂದು ಸಂಜೆ ಭಾಲ್ಕಿಯಲ್ಲಿ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ
ಭಾರತ ಮತ್ತು ಜಗತ್ತಿನಾದ್ಯಂತ ನಡೆಯುತ್ತಿರುವ ಅತ್ಯಂತ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ನೋಟ ಇಲ್ಲಿದೆ
ಇಂದು ಗುರುವಾರ, ಜನವರಿ 17, 2026. ಭಾರತದ ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ವಲಯಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇಂದಿನ ಪ್ರಮುಖ ಮತ್ತು ಟ್ರೆಂಡಿಂಗ್ ಸುದ್ದಿಗಳ ಸಮಗ್ರ ನೋಟ ಇಲ್ಲಿದೆ.
Live Updates
- 17 Jan 2026 8:19 AM IST
ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಡಿಸಿಎಂ ಸಂತಾಪ
ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಸಿಎಂ ಎಕ್ಸ್ ಪೋಸ್ಟ್
ಡಿಸಿಎಂ ಪೋಸ್ಟ್
- 17 Jan 2026 7:14 AM IST
ಇಂದು ಸಂಜೆ ಭಾಲ್ಕಿಯಲ್ಲಿ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ
ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಮಾಜಿ ಸಚಿವರಾದ ಭೀಮಣ್ಣ ಖಂಡ್ರೆ ಅವರು ಶನಿವಾರ ರಾತ್ರಿ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ತಮ್ಮ ನಿವಾಸದಲ್ಲಿ ನಿಧನರಾದರು. 102 ವರ್ಷ ವಯಸ್ಸಿನ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮುತ್ಸದ್ದಿ ರಾಜಕಾರಣಿಯ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಪುತ್ರ ಸಚಿವ ಈಶ್ವರ ಖಂಡ್ರೆ ಅವರು ತಂದೆಯ ನಿಧನದಿಂದ ದುಃಖಿತರಾಗಿದ್ದಾರೆ.
ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಭಾಲ್ಕಿಯ ಗಾಂಧಿ ಗಂಜ್‌ನಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿರುವ ಶಾಂತಿಧಾಮದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ಅವರ ಪತ್ನಿ ಲಿಂಗೈಕ್ಯ ಲಕ್ಷ್ಮೀಬಾಯಿ ಅವರ ಸಮಾಧಿಯ ಪಕ್ಕದಲ್ಲೇ ವಿಧಿವಿಧಾನಗಳನ್ನು ಪೂರೈಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

