LIVE Breaking| ವಾಚ್ ಮೂಲಕ ಅಜಿತ್ ಪವಾರ್ ದೇಹ ಪತ್ತೆ
x
ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್

Breaking| ವಾಚ್ ಮೂಲಕ ಅಜಿತ್ ಪವಾರ್ ದೇಹ ಪತ್ತೆ

ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ. ವಿಮಾನದಲ್ಲಿದ್ದ ನಾಲ್ಕೈದು ಮಂದಿಗೆ ಗಂಭೀರ ಗಾಯಗಳಾಗಿವೆ.


Click the Play button to hear this message in audio format

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ಪತನಗೊಂಡಿದೆ. ಮಹಾರಾಷ್ಟ್ರದ ಭಾರಾಮತಿಯಲ್ಲಿ ಈ ದುರಂತ ಸಂಭವಿಸಿದೆ. ಲ್ಯಾಂಡಿಂಗ್ ಆಗುವ ಸಂದರ್ಭದಲ್ಲಿ ತಾಂತ್ರಿಕ ದೋಷಗಳಿಂದ ಅಪಘಾತಕ್ಕೀಡಾಗಿದೆ.

ಭೀಕರ ದುರಂತದ ದೃಶ್ಯ

ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಇನ್ನು ವಿಮಾನದಲ್ಲಿ ನಾಲ್ಕರಿಂದ ಐದು ಜನರಿದ್ದರು. ವಿಮಾನದಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದುರ್ಘಟನೆ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.

Live Updates

  • 28 Jan 2026 10:34 AM IST

    ಅಜಿತ್ ಪವಾರ್ ನಿಧನದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಮಾಹಿತಿ

    ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಕ್ಷಣವೇ ವಿಷಯ ತಿಳಿಸಲಾಯಿತು. ಉಭಯ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನೂ ಸಂಪರ್ಕಿಸಿ ಮಾಹಿತಿ ಪಡೆದರು.

  • ಅಜಿತ್ ಪವಾರ್ ಇದ್ದ ವಿಮಾನ ಯಾವುದು?
    28 Jan 2026 10:32 AM IST

    ಅಜಿತ್ ಪವಾರ್ ಇದ್ದ ವಿಮಾನ ಯಾವುದು?

    ಅಜಿತ್‌ ಪವಾರ್‌ ಇದ್ದ ಅಪಘಾತಕ್ಕೀಡಾದ ವಿಮಾನವು ವಿಎಸ್ಆರ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಮಾಲೀಕತ್ವದ ಲಿಯರ್‌ಜೆಟ್ 45ಎಕ್ಸ್‌ಆರ್ (Learjet 45XR) ಆಗಿದೆ. ಈ ಕಂಪನಿಯನ್ನು ವಿ.ಕೆ. ಸಿಂಗ್ ಅವರು ಸ್ಥಾಪಿಸಿದ್ದು, ಅವರ ನೇತೃತ್ವದಲ್ಲಿ ವಿಎಸ್ಆರ್ ವೆಂಚರ್ಸ್ ಈ ವಿಮಾನವನ್ನು ನಿರ್ವಹಿಸುತ್ತಿತ್ತು.

  • 28 Jan 2026 10:31 AM IST

    ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ವಿಧಿವಶ

  • 28 Jan 2026 10:29 AM IST

    ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಪಕ್ಷದ ನಾಯಕರು ದು:ಖತಪ್ತರಾಗಿದ್ದಾರೆ. 

  • 28 Jan 2026 10:25 AM IST

    ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಂತಾಪ


  • 28 Jan 2026 10:25 AM IST

    ಅಜಿತ್ ಪವಾರ್ ನಿಧನಕ್ಕೆ ಕಂಬನಿ ಮಿಡಿದ ಡಿ.ಕೆ ಶಿವಕುಮಾರ್‌

    ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ (66) ಅವರು ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಈ ದುರ್ಘಟನೆ ನಡೆದಿದೆ. ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಸಂತಾಪ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನರಾದ ಸುದ್ದಿ ಕೇಳಿ ಆಘಾತ ಮತ್ತು ತೀವ್ರ ದುಃಖವಾಗಿದೆ. ಅವರ ಹಠಾತ್ ನಿಧನವು ಸಾರ್ವಜನಿಕ ಜೀವನಕ್ಕೆ ಮತ್ತು ಮಹಾರಾಷ್ಟ್ರರಾಜಕಾರಣಕ್ಕೆ ದೊಡ್ಡ ನಷ್ಟವಾಗಿದೆ. ಅಲ್ಲಿ ಅವರು ಅಪಾರ ಅನುಭವ ಮತ್ತು ದೃಢಸಂಕಲ್ಪದಿಂದ ಸೇವೆ ಸಲ್ಲಿಸಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು, ಹಾಗೂ ಈ ದುಃಖದ ಸಮಯದಲ್ಲಿ ಅವರಿಗೆ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. ಎಂದು ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

  • 28 Jan 2026 10:16 AM IST

    ಅಜಿತ್ ಪವಾರ್ ನಿಧನಕ್ಕೆ ಸಂಸದೆ ಪ್ರಿಯಾಂಕಾ ಚತುರ್ವೇದಿ ತೀವ್ರ ಸಂತಾಪ

    ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ದೇಶಾದ್ಯಂತ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಇದನ್ನು "ಅತ್ಯಂತ ಆಘಾತಕಾರಿ, ನೋವಿನ ಮತ್ತು ಹೃದಯ ವಿದ್ರಾವಕ" ಎಂದು ಬಣ್ಣಿಸಿದ್ದಾರೆ. ಅಜಿತ್ ಪವಾರ್ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡ ಅವರು, "ನಮ್ಮ ನಡುವೆ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ. ಅವರು ತಮ್ಮ ಕೆಲಸಕ್ಕೆ ಸಂಪೂರ್ಣವಾಗಿ ಬದ್ಧರಾಗಿದ್ದ ವ್ಯಕ್ತಿಯಾಗಿದ್ದರು. ಅವರ ಅಗಲಿಕೆ ವೈಯಕ್ತಿಕವಾಗಿ ಬಹಳ ನೋವು ತಂದಿದೆ" ಎಂದು ಭಾವುಕರಾಗಿ ನುಡಿದಿದ್ದಾರೆ.

  • 28 Jan 2026 10:02 AM IST

  • 28 Jan 2026 10:01 AM IST

    ಅಜಿತ್‌ ಪವಾರ್‌ ನಿವಾಸದತ್ತ ದೌಡಾಯಿಸಿದ ನಾಯಕರು

    ಅಜಿತ್‌ ಪವಾರ್‌ ನಿಧನದ ಸುದ್ದಿ ಕೇಳುತ್ತಿದ್ದಂತೆ ಹಲವು ರಾಜಕೀಯ ಮುಖಂಡರು ಅವರ ನಿವಾಸದತ್ತ ತೆರಳುತ್ತಿದ್ದಾರೆ.

  • 28 Jan 2026 9:58 AM IST

    ಅಜಿತ್‌ ಪವಾರ್‌ ದಾರುಣ- DGCA ಖಚಿತ

    ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾಗಿದ್ದಾರೆ. ವಿಮಾನ ಲ್ಯಾಂಡಿಂಗ್ ವೇಳೆ ಸಂಭವಿಸಿದ ತಾಂತ್ರಿಕ ದೋಷದಿಂದ ಈ ದುರಂತ ನಡೆದಿದ್ದು, DGCA ಈ ಸುದ್ದಿಯನ್ನು ಅಧಿಕೃತವಾಗಿ ದೃಢಪಡಿಸಿದೆ.

Read More
Next Story