
BJP Candidates List| ಬಂಗಾಳ, ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್
Five state Assembly Election| ಪಶ್ಚಿಮ ಬಂಗಾಳ ಮತ್ತು ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸುವೇಂದು ಅಧಿಕಾರಿ, ರಾಜೀವ್ ಚಂದ್ರಶೇಖರ್ ಸೇರಿದಂತೆ ಪ್ರಮುಖ ನಾಯಕರ ಸ್ಪರ್ಧೆಯ ಸಂಪೂರ್ಣ ವಿವರ ಇಲ್ಲಿದೆ.
ಮುಂಬರುವ ಪಶ್ಚಿಮ ಬಂಗಾಳ ಮತ್ತು ಕೇರಳ ವಿಧಾನಸಭಾ ಚುನಾವಣೆಗಳಿಗೆ ಭಾರತೀಯ ಜನತಾ ಪಾರ್ಟಿ (BJP) ಸೋಮವಾರ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಶ್ಚಿಮ ಬಂಗಾಳದ 144 ಕ್ಷೇತ್ರಗಳಿಗೆ ಮತ್ತು ಕೇರಳದ 47 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಹಲವು ಘಟಾನುಘಟಿ ನಾಯಕರಿಗೆ ಟಿಕೆಟ್ ನೀಡಲಾಗಿದೆ.
ಪಶ್ಚಿಮ ಬಂಗಾಳ: ನಂದಿಗ್ರಾಮ ಮತ್ತು ಭವಾನಿಪುರದಲ್ಲಿ ಸುವೇಂದು ಅಬ್ಬರ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ತನ್ನ ಪ್ರಬಲ ನಾಯಕ ಸುವೇಂದು ಅಧಿಕಾರಿ ಅವರಿಗೆ ಎರಡು ಕ್ಷೇತ್ರಗಳಿಂದ ಟಿಕೆಟ್ ನೀಡಿದೆ. ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿನಿಧಿಸುವ ಭವಾನಿಪುರ ಮತ್ತು ಕಳೆದ ಬಾರಿ ಮಮತಾ ಅವರನ್ನು ಸೋಲಿಸಿದ್ದ ನಂದಿಗ್ರಾಮ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ. ಇದು ಮಮತಾ ಮತ್ತು ಸುವೇಂದು ನಡುವಿನ ನೇರ ಹಣಾಹಣಿಗೆ ಸಾಕ್ಷಿಯಾಗಲಿದೆ.
• ದಿಲೀಪ್ ಘೋಷ್: ಖರಗ್‌ಪುರ ಸದರ್ ಕ್ಷೇತ್ರದಿಂದ ಸ್ಪರ್ಧೆ.
• ಅಗ್ನಿಮಿತ್ರ ಪೌಲ್: ಅಸನ್ಸೋಲ್ ದಕ್ಷಿಣ ಕ್ಷೇತ್ರದಿಂದ ಕಣಕ್ಕೆ.
• ಸ್ವಪನ್ ದಾಸ್‌ಗುಪ್ತಾ: ರಾಶ್‌ಬೆಹರಿ ಕ್ಷೇತ್ರದಿಂದ ಸ್ಪರ್ಧೆ.
ಕೇರಳದಲ್ಲೂ ಬಿಜೆಪಿ ಮೊದಲ ಪಟ್ಟಿ ರಿಲೀಸ್
ಕೇರಳದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಲು ಮುಂದಾಗಿರುವ ಬಿಜೆಪಿ, ಮೊದಲ ಪಟ್ಟಿಯಲ್ಲಿ 47 ಅಭ್ಯರ್ಥಿಗಳನ್ನು ಘೋಷಿಸಿದೆ.
• ರಾಜೀವ್ ಚಂದ್ರಶೇಖರ್: ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ನೇಮಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
• ವಿ. ಮುರಳೀಧರನ್: ಕಜಕ್ಕೂಟಂ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
• ಕೆ. ಸುರೇಂದ್ರನ್: ಮಂಜೇಶ್ವರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
• ಶೋಭಾ ಸುರೇಂದ್ರನ್: ಪಾಲಕ್ಕಾಡ್ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದಾರೆ.
• ಆರ್. ಶ್ರೀಲೇಖಾ: ಮಾಜಿ ಐಪಿಎಸ್ ಅಧಿಕಾರಿ ಶ್ರೀಲೇಖಾ ಅವರು ವಟ್ಟಿಯೂರ್ಕಾವು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
• ನವ್ಯಾ ಹರಿದಾಸ್: ಕೋಝಿಕ್ಕೋಡ್ ಉತ್ತರ ಕ್ಷೇತ್ರದಿಂದ ಕಣಕ್ಕೆ.

