ನೇಪಾಳ ಪ್ರವಾಹದಲ್ಲಿ ಇನ್ಫೋಸಿಸ್ ಅಧಿಕಾರಿ ಲಕ್ಷ್ ಗೋಪಿಸೆಟ್ಟಿ ನಾಪತ್ತೆ
x

ನೇಪಾಳದ ಭೀಕರ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲಕ್ಷ್ ಗೋಪಿಸೆಟ್ಟಿ ನಾಪತ್ತೆಯಾಗಿದ್ದಾರೆ.

ನೇಪಾಳ ಪ್ರವಾಹದಲ್ಲಿ ಇನ್ಫೋಸಿಸ್ ಅಧಿಕಾರಿ ಲಕ್ಷ್ ಗೋಪಿಸೆಟ್ಟಿ ನಾಪತ್ತೆ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ಕನಿಷ್ಠ 320 ಭಾರತೀಯರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.


Click the Play button to hear this message in audio format

ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲಕ್ಷ್ ಗೋಪಿಸೆಟ್ಟಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಇನ್ಫೋಸಿಸ್ ಶುಕ್ರವಾರ ತಿಳಿಸಿದೆ. ವೈಯಕ್ತಿಕ ಕಾರ್ಯ ನಿಮಿತ್ತ ಅವರು ನೇಪಾಳಕ್ಕೆ ತೆರಳಿದ್ದರು. ಅವರ ಸುರಕ್ಷತೆ ಖಚಿತಪಡಿಸಿಕೊಳ್ಳುವುದು ಮತ್ತು ಅವರನ್ನು ಪತ್ತೆಹಚ್ಚುವುದು ಸಂಸ್ಥೆಯ ತಕ್ಷಣದ ಆದ್ಯತೆಯಾಗಿದೆ ಎಂದು ಇನ್ಫೋಸಿಸ್ ಹೇಳಿದೆ.

ಗೋಪಿಸೆಟ್ಟಿಯನ್ನು ಪತ್ತೆಹಚ್ಚಲು ಸಂಬಂಧಿತ ಅಧಿಕಾರಿಗಳು ಹಾಗೂ ಏಜೆನ್ಸಿಗಳೊಂದಿಗೆ ಇನ್ಫೋಸಿಸ್ ಕಾರ್ಯನಿರ್ವಹಿಸುತ್ತಿದೆ. ಅವರ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲ ನೆರವನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ. ನೇಪಾಳದಲ್ಲಿ ಸಂಭವಿಸಿರುವ ಪ್ರವಾಹ ಹಾಗೂ ಜೀವಹಾನಿಯಿಂದ ಇನ್ಫೋಸಿಸ್ ತೀವ್ರ ದುಃಖ ವ್ಯಕ್ತಪಡಿಸಿದೆ.

320 ಭಾರತೀಯರು ಇನ್ನೂ ನಾಪತ್ತೆ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ಕನಿಷ್ಠ 320 ಭಾರತೀಯರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಚೀನಾದ ಭಾಗದಲ್ಲಿ ಸುಮಾರು 400 ಭಾರತೀಯರು ಸಿಲುಕಿಕೊಂಡಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

153 ಭಾರತೀಯರ ರಕ್ಷಣೆ

ಚೀನಾದ ಭಾಗದಲ್ಲಿ ಸಿಲುಕಿದ್ದ 153 ಭಾರತೀಯರು ಸುರಕ್ಷಿತವಾಗಿ ನೇಪಾಳಕ್ಕೆ ತಲುಪಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಂದ ಕಠ್ಮಂಡುವಿಗೆ ಬಂದಿದ್ದ 21 ಭಾರತೀಯರು ಶುಕ್ರವಾರ ಮಧ್ಯಾಹ್ನ ದೆಹಲಿಗೆ ಆಗಮಿಸಿದ್ದಾರೆ. ಇನ್ಫೋಸಿಸ್ ವೆಬ್‌ಸೈಟ್‌ನಲ್ಲಿರುವ ಮಾಹಿತಿಯ ಪ್ರಕಾರ, ಲಕ್ಷ ಗೋಪಿಸೆಟ್ಟಿ ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ತಂತ್ರಜ್ಞಾನ, ಕಾರ್ಯಾಚರಣೆ, ಕಾರ್ಯತಂತ್ರ ಮತ್ತು ಪರಿವರ್ತನೆಗೆ ಸಂಬಂಧಿಸಿದ ಸಲಹೆಗಳನ್ನು ನೀಡುತ್ತಿದ್ದರು. ಇದಕ್ಕೂ ಮೊದಲು ಇನ್ಫೋಸಿಸ್‌ನಲ್ಲಿ ಗ್ಲೋಬಲ್ ವೈಸ್ ಪ್ರೆಸಿಡೆಂಟ್ ಹಾಗೂ ಬಿಸಿನೆಸ್ ಅಪ್ಲಿಕೇಷನ್ಸ್ ಮತ್ತು ಡಿಜಿಟಲ್ ವರ್ಕ್‌ಸ್ಪೇಸ್ ಸರ್ವಿಸ್ ವಿಭಾಗದ ಮುಖ್ಯಸ್ಥರಾಗಿದ್ದರು. ಇನ್ಫೋಸಿಸ್ ಸೇರುವ ಮುನ್ನ ಅಕ್ಸೆಂಚರ್‌ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದರು.

Read More
Next Story