x

ಕರ್ನಾಟಕದಲ್ಲಿ ಮತ್ತೆ ಮಳೆ.. ನ.1ರಿಂದ 5ರವರೆಗೆ ಹವಾಮಾನದಲ್ಲಿ ಬದಲಾವಣೆ

ನವೆಂಬರ್ 1ರಿಂದ 3ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.


Click the Play button to hear this message in audio format

ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಹವಾಮಾನದಲ್ಲಿ ಏರಿಳಿತವಾಗುವ ಮುನ್ಸೂಚನೆ ಇದೆ. ನವೆಂಬರ್ 1ರಿಂದ 3ರವರೆಗೆ ರಾಜ್ಯದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಇದರೊಂದಿಗೆ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಮಿಂಚು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.

Read More
Next Story