Stone pelting on train carrying RSS chief Mohan Bhagwat: Suspect arrested
x

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

RSS ಮುಖ್ಯಸ್ಥ ಮೋಹನ್ ಭಾಗವತ್ ಇದ್ದ ರೈಲಿನ ಮೇಲೆ ಕಲ್ಲು ತೂರಾಟ: ಶಂಕಿತನ ಬಂಧನ

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅಲರ್ಟ್ ಆದ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.


Click the Play button to hear this message in audio format

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಅದೃಷ್ಟವಶಾತ್ ಮೋಹನ್ ಭಾಗವತ್ ಸೇರಿ ಎಲ್ಲಾ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೇ ಸುರಕ್ಷಿತರಾಗಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅಲರ್ಟ್ ಆದ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ನಡೆದಿದ್ದು ಹೇಗೆ?

ಗುರುವಾರ (ಜೂ.11) ಸಂಜೆ ಕಾನ್ಪುರದಿಂದ ದೆಹಲಿಗೆ ಹೊರಟಿದ್ದ ಸ್ವರ್ಣ ಶತಾಬ್ದಿ ಎಕ್ಸ್ಪ್ರೆಸ್ ರೈಲಿನಲ್ಲಿ ಮೋಹನ್‌ ಭಾಗವತ್‌ ಅವರು ಪ್ರಯಾಣಿಸುತ್ತಿದ್ದರು. ಸಂಜೆ ಸುಮಾರು 7.15 ರ ವೇಳೆಗೆ ರೈಲು ಫಿರೋಜಾಬಾದ್ ಜಿಲ್ಲೆಯ ಮಖನ್ಪುರ ನಿಲ್ದಾಣದ ಬಳಿ ಹಾದುಹೋಗುತ್ತಿದ್ದಾಗ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ದುಷ್ಕರ್ಮಿಗಳು ಎಸೆದ ಕಲ್ಲು ಮೋಹನ್ ಭಾಗವತ್ ಅವರು ಪ್ರಯಾಣಿಸುತ್ತಿದ್ದ ಎಸಿ ಕೋಚ್‌ನ ಕಿಟಕಿಗೆ ತಗುಲಿದೆ.

ಕಲ್ಲು ತಗುಲಿದ ರಭಸಕ್ಕೆ ಕಿಟಕಿಯ ಹೊರಗಿನ ಗಾಜು ಮಾತ್ರ ಬಿರುಕು ಬಿಟ್ಟಿದೆ. ಮೋಹನ್ ಭಾಗವತ್ ಅವರು ಆ ಕಿಟಕಿಯ ಎದುರು ಭಾಗದ ಸೀಟಿನಲ್ಲಿ ಕುಳಿತಿದ್ದರಿಂದ ಹಾಗೂ ಒಳಗಿನ ಗಾಜು ಸುರಕ್ಷಿತವಾಗಿದ್ದರಿಂದ ಅವರಿಗೆ ಮತ್ತು ಸಹ-ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.

ಸ್ಥಳಕ್ಕೆ ಧಾವಿಸಿದ ಹಿರಿಯ ಅಧಿಕಾರಿಗಳ ದಂಡು

ವಿವಿಐಪಿ ಪ್ರಯಾಣಿಸುತ್ತಿದ್ದ ರೈಲಿನ ಮೇಲೆಯೇ ಕಲ್ಲು ತೂರಾಟ ನಡೆದಿರುವ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಇಲಾಖೆ ಹಾಗೂ ಉತ್ತರ ಪ್ರದೇಶದ ಉನ್ನತ ಪೊಲೀಸ್ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾದರು. ಆಗ್ರಾ ವಲಯದ ಎಡಿಜಿ ಎಸ್‌.ಕೆ. ಭಗತ್, ಡಿಐಜಿ ಶೈಲೇಶ್ ಪಾಂಡೆ ಮತ್ತು ಫಿರೋಜಾಬಾದ್ ಎಸ್ಎಸ್ಪಿ ಆದಿತ್ಯ ಲಾಂಘೆ ಸೇರಿದಂತೆ ಹಿರಿಯ ಅಧಿಕಾರಿಗಳ ದಂಡೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಘಟನೆಯ ಗಂಭೀರತೆಯನ್ನು ಪರಿಗಣಿಸಿ ರೈಲ್ವೆ ಹಳಿಗಳ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ತಪಾಸಣೆ ನಡೆಸಿದ ಪೊಲೀಸರು, ಕೆಲವೇ ಗಂಟೆಗಳಲ್ಲಿ ಒಬ್ಬ ಶಂಕಿತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ಬೆನ್ನಲ್ಲೇ ರೈಲನ್ನು ತುಂಡ್ಲಾ ಜಂಕ್ಷನ್ ಹೊರ ಸಿಗ್ನಲ್‌ನಲ್ಲಿ ತುರ್ತಾಗಿ ನಿಲ್ಲಿಸಲಾಯಿತು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಇಡೀ ಕೋಚ್‌ ಸುರಕ್ಷತೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಯಾವುದೇ ಆತಂಕವಿಲ್ಲ ಎಂದು ಖಚಿತಪಡಿಸಿಕೊಂಡ ನಂತರ ಸಂಜೆ 7.41 ಕ್ಕೆ ರೈಲು ದೆಹಲಿಯತ್ತ ತನ್ನ ಪ್ರಯಾಣ ಮುಂದುವರಿಸಿತು.

Read More
Next Story