ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್‌ರಿಂದ ಅನ್ನದಾನ
ನ್ಯೂಯಾರ್ಕ್ ಇಸ್ಕಾನ್‌ಗೆ ಭೇಟಿ ನೀಡಿದ ಮೋಹನ್ ಭಾಗವತ್, ನಿರಾಶ್ರಿತರು ಹಾಗೂ ಅಗತ್ಯವಿರುವವರಿಗೆ ಆಹಾರ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸೇವೆಯ ಮಹತ್ವ ಸಾರಿದರು.
ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕದ ನ್ಯೂಯಾರ್ಕ್‌ನ ಇಸ್ಕಾನ್‌ಗೆ ಭೇಟಿ ನೀಡಿ, ನಿರಾಶ್ರಿತರಿಗೆ ಆಹಾರ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಗರದ ನಿರಾಶ್ರಿತರು ಹಾಗೂ ಅಗತ್ಯವಿರುವವರಿಗೆ ನೆರವು ನೀಡುವ ಉದ್ದೇಶದಿಂದ ಆಯೋಜಿಸಲಾಗಿದ್ದ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಈ ವೇಳೆ ಮೋಹನ್ ಭಾಗವತ್ ಅವರು ಸೇವಾ ಕಾರ್ಯದ ಮಹತ್ವದ ಕುರಿತು ಮಾತನಾಡಿದರು. ಇಸ್ಕಾನ್ ವತಿಯಿಂದ ನಡೆಯುತ್ತಿರುವ ಮಾನವೀಯ ಸೇವಾ ಚಟುವಟಿಕೆಗಳ ಬಗ್ಗೆಯೂ ಮಾಹಿತಿ ಪಡೆಯಲಾಯಿತು. ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಹಾರ ವಿತರಣೆ, ಮೋಹನ್ ಭಾಗವತ್ ಅವರ ಉಪಸ್ಥಿತಿ ಹಾಗೂ ಅವರು ನೀಡಿದ ಭಾಷಣದ ದೃಶ್ಯಗಳು ಈ ವಿಡಿಯೊದಲ್ಲಿವೆ. ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಮತ್ತು ಮೋಹನ್ ಭಾಗವತ್ ಅವರ ಮಾತುಗಳನ್ನು ವಿಡಿಯೊದಲ್ಲಿ ವೀಕ್ಷಿಸಬಹುದು.
Next Story

