
ಯೂಟ್ಯೂಬ್‌ನಲ್ಲಿ 3 ಕೋಟಿ ಸಬ್‌ಸ್ಕ್ರೈಬರ್ಸ್- ನರೇಂದ್ರ ಮೋದಿ ಹೊಸ ದಾಖಲೆ!
Narendra Modi| ಪ್ರಧಾನಿ ನರೇಂದ್ರ ಮೋದಿ ಅವರ ಯೂಟ್ಯೂಬ್ ಚಾನಲ್ 30 ಮಿಲಿಯನ್ (3 ಕೋಟಿ) ಚಂದಾದಾರರ ಮೈಲಿಗಲ್ಲನ್ನು ದಾಟಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಬೆನ್ನಲ್ಲೇ ಈ ಹೊಸ ದಾಖಲೆ ನಿರ್ಮಾಣವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಲೋಕದಲ್ಲಿ ತಮ್ಮ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅವರ ಅಧಿಕೃತ ಯೂಟ್ಯೂಬ್ ಚಾನಲ್ ಈಗ 3 ಕೋಟಿ (30 ಮಿಲಿಯನ್) ಚಂದಾದಾರರ ಮೈಲಿಗಲ್ಲನ್ನು ದಾಟಿದ್ದು, ಈ ಮೂಲಕ ವಿಶ್ವದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ರಾಜಕೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವಿಶ್ವದ ಇತರ ಪ್ರಮುಖ ನಾಯಕರಿಗೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿಯವರ ಡಿಜಿಟಲ್ ವ್ಯಾಪ್ತಿ ಅತ್ಯಂತ ವಿಶಾಲವಾಗಿದ್ದು, ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರಿಗಿಂತ ನಾಲ್ಕು ಪಟ್ಟು ಹೆಚ್ಚು ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಸುಮಾರು 7 ಪಟ್ಟು ಹೆಚ್ಚು ಯೂಟ್ಯೂಬ್ ಚಂದಾದಾರರನ್ನು ಹೊಂದುವ ಮೂಲಕ ಅವರು ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ದೇಶದಲ್ಲೂ ವಿರೋಧ ಪಕ್ಷದ ನಾಯಕರಿಗಿಂತ ಮೋದಿ ಬಹುದೂರ ಮುಂದೆ ಇದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗಿಂತ ಮೋದಿಯವರ ಸಬ್‌ಸ್ಕ್ರೈಬರ್ಸ್ ಸಂಖ್ಯೆ ಸುಮಾರು 3 ಪಟ್ಟು ಹೆಚ್ಚು. ಇನ್ನು ಆಮ್ ಆದ್ಮಿ ಪಾರ್ಟಿ (AAP) ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷಗಳ ಒಟ್ಟಾರೆ ಅಧಿಕೃತ ಚಾನಲ್‌ಗಳಿಗಿಂತ 4 ಪಟ್ಟು ಹೆಚ್ಚು ಜನರು ಮೋದಿ ಚಾನಲ್ ಅನ್ನು ಫಾಲೋ ಮಾಡುತ್ತಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ
ಕಳೆದ ತಿಂಗಳಷ್ಟೇ ಪ್ರಧಾನಿ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ (100 ಮಿಲಿಯನ್) ಫಾಲೋವರ್ಸ್ ದಾಟಿದ ಮೊದಲ ವಿಶ್ವ ನಾಯಕ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. 2014 ರಿಂದ ಇಂದಿನವರೆಗೆ ಅವರ ಡಿಜಿಟಲ್ ಉಪಸ್ಥಿತಿಯು ಕೇವಲ ಮಾಹಿತಿ ನೀಡುವ ವೇದಿಕೆಯಾಗಿರದೇ, ಜನಸಾಮಾನ್ಯರೊಂದಿಗೆ ನೇರ ಸಂವಾದ ನಡೆಸುವ ಅತ್ಯಂತ ಪ್ರಭಾವಿ ಮಾಧ್ಯಮವಾಗಿ ಬೆಳೆದಿದೆ.
ಇನ್‌ಸ್ಟಾಗ್ರಾಮ್‌ನಲ್ಲೂ ಐತಿಹಾಸಿಕ ಮೈಲಿಗಲ್ಲು
ಕಳೆದ ತಿಂಗಳಷ್ಟೇ ಪ್ರಧಾನಿ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ (100 ಮಿಲಿಯನ್) ಫಾಲೋವರ್ಸ್ ಹೊಂದಿದ ಮೊದಲ ವಿಶ್ವ ನಾಯಕ ಮತ್ತು ರಾಜಕಾರಣಿ ಎಂಬ ಐತಿಹಾಸಿಕ ದಾಖಲೆ ಬರೆದಿದ್ದರು. 2014ರಲ್ಲಿ ಇನ್‌ಸ್ಟಾಗ್ರಾಮ್ ಸೇರಿದ ಮೋದಿ, ಕಳೆದ ಒಂದು ದಶಕದಲ್ಲಿ ತಮ್ಮ ಡಿಜಿಟಲ್ ಉಪಸ್ಥಿತಿಯನ್ನು ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಬಲವಾಗಿ ಬೆಳೆಸಿದ್ದಾರೆ.

