ಚುನಾವಣಾ ಆಯುಕ್ತರ ನೇಮಕ ಕಾಯ್ದೆ: ಸುಪ್ರೀಂ ನ್ಯಾಯಮೂರ್ತಿಗಳಿಂದ ಭಿನ್ನ ತೀರ್ಪು
x

ಚುನಾವಣಾ ಆಯುಕ್ತರ ನೇಮಕ ಕಾಯ್ದೆ: ಸುಪ್ರೀಂ ನ್ಯಾಯಮೂರ್ತಿಗಳಿಂದ ಭಿನ್ನ ತೀರ್ಪು

2023ರ ಕಾಯ್ದೆಯನ್ನು ವಿರೋಧಿಸಿ 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್' (ADR), ಜಯಾ ಠಾಕೂರ್, ವಕೀಲ ಗೋಪಾಲ್ ಸಿಂಗ್ ಸೇರಿದಂತೆ ಹಲವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.


ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ 2023ರ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಭಿನ್ನ ತೀರ್ಪು ನೀಡಿದ್ದಾರೆ.

ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಗಳನ್ನು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠಕ್ಕೆ ವರ್ಗಾಯಿಸಬೇಕೆ ಎಂಬ ವಿಚಾರದಲ್ಲಿ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಸತೀಶ್ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠ ಒಮ್ಮತಕ್ಕೆ ಬರಲಿಲ್ಲ.

ನ್ಯಾಯಮೂರ್ತಿ ದೀಪಂಕರ್ ದತ್ತ ಅವರು ಈ ಅರ್ಜಿಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಹೇಳಿದರೆ, ನ್ಯಾ.ಸತೀಶ್‌ಚಂದ್ರ ಅವರು ಸಂವಿಧಾನ ಪೀಠದಲ್ಲಿ ವಿಚಾರಣೆಯ ಅಗತ್ಯವನ್ನು ಪ್ರತಿಪಾದಿಸಿದರು. ಈ ಹಿನ್ನೆಲೆಯಲ್ಲಿ ಅರ್ಜಿಗಳ ಇತ್ಯರ್ಥ ಜವಾಬ್ದಾರಿಯನ್ನು ಮುಖ್ಯನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಲು ನಿರ್ಧರಿಸಲಾಯಿತು.

ಈ ಹಿಂದೆ ಚುನಾವಣಾ ಆಯೋಗದ ಮುಖ್ಯ ಆಯುಕ್ತರ ಆಯ್ಕೆ ಸಮಿತಿಯಲ್ಲಿ ಪ್ರಧಾನಿ, ಕೇಂದ್ರ ಸಚಿವ ಹಾಗೂ ವಿರೋಧ ಪಕ್ಷದ ನಾಯಕರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನು ಸಮಿತಿಯಿಂದ ಹೊರಗಿಡಲಾಗಿತ್ತು.

ಪ್ರಕರಣವು ಗಂಭೀರವಾದ ಸಾಂವಿಧಾನಿಕ ಪ್ರಶ್ನೆ ಒಳಗೊಂಡಿರುವುದರಿಂದ ಇದನ್ನು ಸಂವಿಧಾನ ಪೀಠದ ಪರಿಗಣನೆಗೆ ಒಪ್ಪಿಸಬೇಕು ಎಂದು ತೀರ್ಪು ನೀಡಿದರು. 2023ರ ಕಾಯ್ದೆಯನ್ನು ವಿರೋಧಿಸಿ 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್' (ADR), ಜಯಾ ಠಾಕೂರ್, ವಕೀಲ ಗೋಪಾಲ್ ಸಿಂಗ್ ಸೇರಿದಂತೆ ಹಲವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಸಾಂವಿಧಾನಿಕ ಪ್ರಕರಣಗಳ ವಿಚಾರಣೆ ಹಾಗೂ ತೀರ್ಪು ನೀಡುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಕಳಕಳ ವ್ಯಕ್ತಪಡಿಸಿರುವ ಪೀಠ, ಇಂತಹ ಪ್ರಮುಖ ವಿಷಯಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಕಾಯಂ ಸಾಂವಿಧಾನಿಕ ಪೀಠವೊಂದನ್ನು ರಚಿಸುವ ಸಾಧ್ಯತೆಯನ್ನು ಪರಿಗಣಿಸುವಂತೆ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದೆ.

Read More
Next Story