Actor Darshan Case | ಸಾಕ್ಷ್ಯಾಧಾರ ಸಂಗ್ರಹಿಸಿ ಚಾರ್ಜ್‌ಶೀಟ್ ಸಲ್ಲಿಕೆ: ಜಿ ಪರಮೇಶ್ವರ್‌
x
ನಟ ದರ್ಶನ್

Actor Darshan Case | ಸಾಕ್ಷ್ಯಾಧಾರ ಸಂಗ್ರಹಿಸಿ ಚಾರ್ಜ್‌ಶೀಟ್ ಸಲ್ಲಿಕೆ: ಜಿ ಪರಮೇಶ್ವರ್‌

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ನಂತರ ಚಾರ್ಜ್‌ಶೀಟ್ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಸೋಮವಾರ ಹೇಳಿದ್ದಾರೆ.


Click the Play button to hear this message in audio format

ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 15 ಮಂದಿ ಆರೋಪಿಗಳಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ನಂತರ ಚಾರ್ಜ್‌ಶೀಟ್ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯವಿಧಾನಗಳು ಇವೆ, ಸಾಕಷ್ಟು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನಂತರ ಆರೋಪಪಟ್ಟಿ ಸಲ್ಲಿಸಲಾಗುವುದು. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಅಗತ್ಯವಿಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಕರಣದ ಹಿನ್ನಲೆ

ದರ್ಶನ್‌ ಆಪ್ತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಆರೋಪಿಗಳಲ್ಲಿ ಒಬ್ಬನಾದ ರಾಘವೇಂದ್ರ ಎಂಬಾತ ನಟ ರೇಣುಕಾಸ್ವಾಮಿಯನ್ನು ದರ್ಶನ್‌ ಭೇಟಿ ನೆಪದಲ್ಲಿ ಬೆಂಗಳೂರಿನ ಆರ್ ಆರ್ ನಗರದ ಶೆಡ್‌ಗೆ ಕರೆತಂದಿದ್ದ. ಇದೇ ಶೆಡ್‌ನಲ್ಲಿಯೇ ಜೂನ್ 8 ರಂದು ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ನಂತರ ದರ್ಶನ್ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಶವವನ್ನು ಮೋರಿಗೆ ಎಸೆದು ಹೋಗಿದ್ದರು. ಮೋರಿಯಲ್ಲಿ ತೇಲುತ್ತಿದ್ದ ಶವವನ್ನು ಬೀದಿನಾಯಿಗಳು ಕಚ್ಚಿ ಎಳೆದು ತಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿರುವಾಗ ಈ ಕೊಲೆಯ ಹಿಂದಿನ ರೂವಾರಿ ದರ್ಶನ್ ಎಂದು ತಿಳಿದುಬಂದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಮಹಜರು ನಡೆಸಲಾಗಿದೆ. ಸದ್ಯ ಈ ಪ್ರಕರಣದಲ್ಲಿ ಭಾಗಿಯಾಗಿರುವ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Read More
Next Story