ಸಿ.ಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಬಿಜೆಪಿ ಮುಖಂಡರು ಪೊಲೀಸ್‌ ವಶಕ್ಕೆ
x
ಸಿ.ಎಂ ಮನೆಗೆ ಮುತ್ತಿಗೆ ಹಾಕುತ್ತಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿ.ಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಬಿಜೆಪಿ ಮುಖಂಡರು ಪೊಲೀಸ್‌ ವಶಕ್ಕೆ

ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಬುಧವಾರ ಮುಖ್ಯಮಂತ್ರಿ ಕಚೇರಿ ಮತ್ತು ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.


Click the Play button to hear this message in audio format

ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಬುಧವಾರ ಮುಖ್ಯಮಂತ್ರಿ ಕಚೇರಿ ಮತ್ತು ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಅವರ ಯತ್ನವನ್ನು ವಿಫಲಗೊಳಿಸಿದ ಪೊಲೀಸರು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಪಕ್ಷದ ಮುಖಂಡರನ್ನು ವಶಕ್ಕೆ ಪಡೆದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ, ಮಾಜಿ ಸಚಿವರಾದ ಎಸ್ ಸುನೀಲ್ ಕುಮಾರ್, ಆರಗ ಜ್ಞಾನೇಂದ್ರ, ಎಸ್ ಸುರೇಶ್ ಕುಮಾರ್, ಸಿ ಎನ್ ಅಶ್ವಥ್ ನಾರಾಯಣ್, ಸಿ ಟಿ ರವಿ ಸೇರಿದಂತೆ ಪಕ್ಷದ ಮುಖಂಡರು, ಹಲವು ಶಾಸಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

ಭಾರೀ ಪೊಲೀಸ್ ಪಡೆ ನಿಯೋಜಿಸಿದ್ದರಿಂದ, ಬಿಜೆಪಿ ನಾಯಕರು ತಮ್ಮ ಮುಖ್ಯಮಂತ್ರಿಗಳ ನಿವಾಸ ಮತ್ತು ಕಚೇರಿಯನ್ನು ತಲುಪಲು ಸಾಧ್ಯವಾಗಲಿಲ್ಲ. ಅವರನ್ನು ತಡೆಹಿಡಿದು ಪ್ರತಿಭಟನೆ ನಡೆಸದಂತೆ ಪೊಲೀಸ್‌ ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸುಮಾರು 4,000 ಕೋಟಿ ರೂಪಾಯಿ ಮೌಲ್ಯದ ಪರ್ಯಾಯ ನಿವೇಶನ (ಪ್ಲಾಟ್‌ಗಳು) ಹಗರಣ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಫಲಾನುಭವಿಗಳಲ್ಲಿ ಒಬ್ಬರು ಎಂದು ಬಿಜೆಪಿ ಆರೋಪಿಸಿದೆ.

180 ಕೋಟಿ ರೂ.ಗೂ ಹೆಚ್ಚು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಗಳು ನಡೆದಿವೆ. ಇದು ಖಾತೆಗಳ ಅಧೀಕ್ಷಕ ಪಿ ಚಂದ್ರಶೇಖರನ್ ಅವರನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿತು ಎಂದು ಆರೋಪಿಸಿದ್ದಾರೆ.

'ಕಾಂಗ್ರೆಸ್ ಸರ್ಕಾರದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ನಡೆದ ಮುಡಾ ಹಗರಣ, ವಾಲ್ಮೀಕಿ ನಿಗಮದಲ್ಲಿನ ಹಗರಣಕ್ಕಿಂತ ದೊಡ್ಡದಾಗಿದೆ,' ಎಂದು ವಿಜಯೇಂದ್ರ ಅವರು ಪ್ರತಿಭಟನೆಗೆ ಮುನ್ನ ಸುದ್ದಿಗಾರರಿಗೆ ತಿಳಿಸಿದರು.

ಮುಡಾ ಹಗರಣದ ತನಿಖೆಯನ್ನು ಐಎಎಸ್ ಅಧಿಕಾರಿಗಳ ಸಮಿತಿಗೆ ವಹಿಸುವ ಬದಲು ಸರ್ಕಾರ ಸಿಬಿಐಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಒತ್ತಾಯಿಸಿದರು.

Read More
Next Story