ಬೆಂಗಳೂರಿನಲ್ಲಿ ಮತದಾನ ಹೆಚ್ಚಿಸಲು ಸರ್ಕಸ್: ಬಿಬಿಎಂಪಿ ಮುಖ್ಯ ಆಯುಕ್ತರ ಸಭೆ
x
ತುಷಾರ್‌ ಗಿರಿನಾಥ್‌, ಬಿಬಿಎಂಪಿ ಮುಖ್ಯ ಆಯುಕ್ತ

ಬೆಂಗಳೂರಿನಲ್ಲಿ ಮತದಾನ ಹೆಚ್ಚಿಸಲು ಸರ್ಕಸ್: ಬಿಬಿಎಂಪಿ ಮುಖ್ಯ ಆಯುಕ್ತರ ಸಭೆ

ವಸತಿ ಸಮುಚ್ಛಯಗಳಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಸಿದ್ಧತೆ


ಬೆಂಗಳೂರಿನಲ್ಲಿ ಮತದಾನ ಹೆಚ್ಚಳ ಮಾಡುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡುವುದಕ್ಕಾಗಿ ವಸತಿ ಸಮುಚ್ಛಯಗಳಲ್ಲಿ ಮತದಾನದ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಗೆ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಮತದಾನ ಹೆಚ್ಚಳಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡುವುದಕ್ಕಾಗಿ ವಸತಿ ಸಮುಚ್ಛಯಗಳಲ್ಲಿ ಮತದಾನದ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಗೆ ಮನವಿ ಮಾಡಿದರು.

ಲೋಕಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ತುಷಾರ್ ಗಿರಿನಾಥ್ ಅವರು ಬುಧವಾರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸಂವಾದದಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ 4 ಲೋಕಸಭಾ ಕ್ಷೇತ್ರಗಳಿದ್ದು, ಮತದಾನದ ಪ್ರಮಾಣ ಕಳೆದ ಬಾರಿಗಿಂತ ಹೆಚ್ಚಳ ಮಾಡಬೇಕಿದ್ದು, ಎಲ್ಲರೂ ಸಹಕಾರ ನೀಡಬೇಕು ಎಂದರು.

ಬೆಂಗಳೂರಿನಲ್ಲಿ ವಸತಿ ಸಮುಚ್ಛಯಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲು ಚುನಾವಣಾ ಆಯೋಗವು ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ವಸತಿ ಸಮುಚ್ಛಯಗಳಲ್ಲಿಯೇ ಮತಗಟ್ಟೆಗಳನ್ನು ಸ್ಥಾಪಿಸಿ ಮತದಾನ ಮಾಡಬಹುದಾಗಿದೆ. ಲೋಕಸಭಾ ಚುನಾವಣೆಯ ಸಂಪೂರ್ಣ ಮಾಹಿತಿಯನ್ನು ಚುನಾವಣಾ ವಿಭಾಗದಿಂದ ನೀಡಲಾಗುವುದು. ಮತದಾನ ಜಾಗೃತಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಈ ವೇಳೆ ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಕಾಂತರಾಜು, ಬೆಂಗಳೂರು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ನಿವಾಸಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಇದ್ದರು.

ಸ್ವೀಪ್ ಚುಟುವಟಿಕೆಗೆ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವೀಪ್ ಚಟುವಟಿಕೆಗಳನ್ನು (SVEEP) ನಡೆಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ತಿಳಿಸಿದರು.

ಸ್ವೀಪ್ ಕಾರ್ಯಕ್ರಮ ಎಂದರೇನು ?

ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಜಾಗೃತಿ ಮತ್ತು ಚುನಾವಣಾ ಭಾಗವಹಿಸುವಿಕೆ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವುದು, ತಿದ್ದುಪಡಿ ಅಥವಾ ಪರಿಷ್ಕರಣೆ ಮಾಡುವುದು, ಮತದಾರರ ಪಟ್ಟಿಯಿಂದ ಮರಣ ಹೊಂದಿದವರ ಹೆಸರನ್ನು ತೆಗೆದು ಹಾಕುವುದು ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ವಿಷಯಗಳಿಗೆ ʼಸ್ವೀಪ್ʼ ಎಂದು ಕರೆಯಲಾಗುತ್ತದೆ.

ಶೀಘ್ರ ಅರ್ಜಿ ವಿಲೇವಾರಿಗೆ ನಿರ್ದೇಶನ

ಚುನಾವಣಗೆ ಸಂಬಂಧಿಸಿದ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಹಾಗೂ ಮತದಾನದ ಚೀಟಿಗಳನ್ನು ಮತದಾರ ಮನೆಗಳಿಗೆ ತ್ವರಿತವಾಗಿ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು.

Read More
Next Story