ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ
ಸರ್ಕಾರದ ವಕ್ತಾರರಾಗಿ ನೇಮಕಗೊಂಡಿರುವ ಈ ಎಲ್ಲಾ ಸಚಿವರು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ರಾಜ್ಯದ ಜನರ ಮುಂದಿಡಲಿದ್ದಾರೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ವಕ್ತಾರರನ್ನಾಗಿ ಸಚಿವರಾದ ದಿನೇಶ್ ಗುಂಡೂರಾವ್ , ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಸಂತೋಷ್ ಲಾಡ್ ಅವರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಸರ್ಕಾರದ ವಕ್ತಾರರಾಗಿ ನೇಮಕಗೊಂಡಿರುವ ಈ ಎಲ್ಲಾ ಸಚಿವರು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ರಾಜ್ಯದ ಜನರ ಮುಂದಿಡಲಿದ್ದಾರೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಕ್ತಾರರಾಗಿ ನೇಮಕವಾದ ಸಚಿವರುಗಳಿಗೆ ಸರ್ಕಾರದ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು ಕಾಲಕಾಲಕ್ಕೆ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಸೂಕ್ತ ನಿರ್ದೇಶನ ನೀಡಲು ಆದೇಶದಲ್ಲಿ ಸೂಚಿಸಲಾಗಿದೆ.
Next Story