Dengue Outbreak | ಶಂಕಿತ ಡೆಂಗ್ಯೂಗೆ ಬೆಳಗಾವಿ ಬಾಲಕಿ ಬಲಿ
x
ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ.

Dengue Outbreak | ಶಂಕಿತ ಡೆಂಗ್ಯೂಗೆ ಬೆಳಗಾವಿ ಬಾಲಕಿ ಬಲಿ

ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದ್ದು, ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೇಯಾ ಕೃಷ್ಣಾ ದೇವದಾತೆ (11) ಎಂಬ ಬಾಲಕಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.


Click the Play button to hear this message in audio format

ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದ್ದು, ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೇಯಾ ಕೃಷ್ಣಾ ದೇವದಾತೆ (11) ಎಂಬಾಕೆ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.

ಟೈಫಾಯಿಡ್‌ನಿಂದ ಬಳಲುತ್ತಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ನಿವಾಸಿಯಾದ ಶ್ರೇಯಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಅನಾರೋಗ್ಯದಿಂದ ಶ್ರೇಯಾ ಅಸುನೀಗಿದ್ದಾಳೆ.

ಇನ್ನು ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದುವರೆಗೂ ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಫಲಿಸದೇ ಬೆಂಗಳೂರು ಸೇರಿ ರಾಜ್ಯಾದ್ಯಂತ 7 ಮಂದಿ ಮೃತಪಟ್ಟಿದ್ದಾರೆ. ಶಿವಮೊಗ್ಗ, ಧಾರವಾಡ, ಮೈಸೂರು, ಹಾವೇರಿಯಲ್ಲಿ ತಲಾ ಒಬ್ಬರು ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಸ್‌ ಈಜಿಪ್ಟಿ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

Read More
Next Story