ಬೆಂಗಳೂರಿನಲ್ಲಿ ನೀರಿನ ಶುಲ್ಕ ಹೆಚ್ಛಳ ಸೂಚನೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ಮಾಸಿಕ ನೀರಿನ ಶುಲ್ಕವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ಮಾಸಿಕ ನೀರಿನ ಶುಲ್ಕವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌದಲ್ಲಿ ಬುಧವಾರ ( ಜೂನ್ 18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಷ್ಟದಲ್ಲಿರುವ ಬಿಡಬ್ಲ್ಯುಎಸ್‌ಎಸ್‌ಬಿಗೆ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿಲ್ಲ. ಇದರಿಂದ ಬಿಡಬ್ಲ್ಯುಎಸ್‌ಎಸ್‌ಬಿ ದೊಡ್ಡ ನಷ್ಟವನ್ನು ಅನುಭವಿಸುತ್ತಿದೆ. ಹಾಗಾಗಿ ನಾವು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು. ಬಿಡಬ್ಲ್ಯುಎಸ್‌ಎಸ್‌ಬಿಗೆ ಹಣಕಾಸು ಒದಗಿಸಲು ಯಾವುದೇ ಬ್ಯಾಂಕ್ ಮುಂದೆ ಬರುತ್ತಿಲ್ಲ. ಈಗ (ಕಾವೇರಿ) ಐದನೇ ಹಂತದ (ನೀರು ಸರಬರಾಜು ಯೋಜನೆ) ಪೂರ್ಣಗೊಳ್ಳಲಿದೆ. ಆ ಕಾಮಗಾರಿಗಳಿಗೆ ಹಣ ಹೊಂದಿಸಲು ಆಗುತ್ತಿಲ್ಲ. ಹಾಗಾಗಿ ನೀರಿನ ಕಂದಾಯ ಏರಿಕೆ ಅನಿವಾರ್ಯ ಎಂದು ಶಿವಕುಮಾರ್ ತಿಳಿಸಿದ್ದಾರೆ.
"70 ಪ್ರತಿಶತದಷ್ಟು ವಿದ್ಯುತ್ ಬಿಲ್ ಮತ್ತು ಕಾರ್ಮಿಕ ವೆಚ್ಚವಾಗಿದೆ. ಪ್ರತಿ ವರ್ಷ (BWSSB) ದೊಡ್ಡ ನಷ್ಟ ಅನುಭವಿಸುತ್ತಿದೆ. ಆದ್ದರಿಂದ ಯಾವುದೇ ಆಯ್ಕೆಯಿಲ್ಲ. ನಾನು ಸಾಧ್ಯತೆಗಳನ್ನು ಯೋಚಿಸುತ್ತಿದ್ದೇನೆ. ನಾವು ಹಣಕಾಸು ಹೊಂದಾಣಿಕೆ ಹೇಗೆ ಎಂದು ಚರ್ಚಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.