
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಫೇಸ್‌ಬುಕ್ ಫಾಲೋವರ್ಸ್ ಸಂಖ್ಯೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ
ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ ಹಾಗೂ ವಿಶ್ವಾಸಕ್ಕೆ ನಾನು ಚಿರಋಣಿ," ಎಂದು ತಮ್ಮನ್ನು ಫಾಲೋ ಮಾಡಿದ ಜನರಿಗೆ ಸಚಿವರು ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ರಾಜಕೀಯದಲ್ಲಿ ಮಾತ್ರವಲ್ಲ, ಸಾಮಾಜಿಕ ಜಾಲತಾಣಗಳಲ್ಲೂ ಸದಾ ಸಕ್ರಿಯ. ತಮ್ಮ ದೈನಂದಿನ ಕಾರ್ಯಚಟುವಟಿಕೆಗಳು, ಇಲಾಖೆಯ ಯೋಜನೆಗಳು ಮತ್ತು ಸಾರ್ವಜನಿಕ ಸಂಪರ್ಕವನ್ನು ಫೇಸ್‌ಬುಕ್ ಮೂಲಕವೇ ಜನರ ಮುಂದಿಡುತ್ತಾರೆ. ಹಾಗಾದರೆ, ಅವರ ಫೇಸ್‌ಬುಕ್ ಖಾತೆಯನ್ನು ಎಷ್ಟು ಜನರು ಹಿಂಬಾಲಿಸುತ್ತಿದ್ದಾರೆ ಗೊತ್ತೇ?
ಹೌದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧಿಕೃತ ಫೇಸ್‌ಬುಕ್ ಪೇಜ್ ಇದೀಗ ಬರೋಬ್ಬರಿ 4 ಲಕ್ಷ ಫಾಲೋವರ್ಸ್‌ಗಳನ್ನು ಹೊಂದುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಚಿವರು, "ನನ್ನ ಫೇಸ್‌ಬುಕ್ ಪೇಜ್ ನಾಲ್ಕು ಲಕ್ಷ ಫಾಲೋವರ್ಸ್‌ಗಳನ್ನು ಹೊಂದುವ ಮೂಲಕ ಮತ್ತೊಂದು ಮೈಲಿಗಲ್ಲು ತಲುಪಿದೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ ಹಾಗೂ ವಿಶ್ವಾಸಕ್ಕೆ ನಾನು ಚಿರಋಣಿ," ಎಂದು ತಮ್ಮನ್ನು ಹಿಂಬಾಲಿಸುವ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿರುವುದು ಅವರ ಜನಪ್ರಿಯತೆಗೆ ಕಾರಣವಾಗಿದೆ.