ಪಾಕ್‌ ಪರ ಗೂಢಾಚಾರಿಕೆ: ರಾಯಭಾರ ಕಚೇರಿಯ ಸಿಬ್ಬಂದಿ ಬಂಧನ
x
ಬಂಧಿತ ಆರೋಪಿ ಸತ್ಯೇಂದ್ರ ಸಿವಾಲ್

ಪಾಕ್‌ ಪರ ಗೂಢಾಚಾರಿಕೆ: ರಾಯಭಾರ ಕಚೇರಿಯ ಸಿಬ್ಬಂದಿ ಬಂಧನ

ಪಾಕ್‌ ಪರ ಗೂಢಾಚಾರಿಕೆ ಆರೋಪದ ಮೇರೆಗೆ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.


ಹೊಸದಿಲ್ಲಿ (ಪಿಟಿಐ): ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ಭಾರತದ ಮೇಲೆ ಗೂಢಚಾರಿಕೆ ನಡೆಸಿದ ಆರೋಪದ ಮೇಲೆ ಮಾಸ್ಕೋದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (ಎಂಇಎ) ತನಿಖಾ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉತ್ತರಪ್ರದೇಶದ ಹಾಪುರ್ ಜಿಲ್ಲೆಯ ಶಹಮಹಿಯುದ್ದೀನ್‌ಪುರ ಗ್ರಾಮದ ನಿವಾಸಿ ಸತ್ಯೇಂದ್ರ ಸಿವಾಲ್ ಬಂಧಿತ ಆರೋಪಿ. ಆತನ ವಿಚಾರಣೆ ನಡೆಸಿದ್ದ ಉತ್ತರಪ್ರದೇಶ ಪೊಲೀಸರ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ಆತನನ್ನು ಲಕ್ನೋದಲ್ಲಿ ಬಂಧಿಸಿದೆ.

ಉತ್ತರಪ್ರದೇಶದಲ್ಲಿ ಸತ್ಯೇಂದ್ರ ಸಿವಾಲ್ ಬಂಧನದ ಬಗ್ಗೆ ಎಂಇಎಗೆ ಮಾಹಿತಿ ಬಂದಿದೆ. ಅವರನ್ನು ಮಾಸ್ಕೋದ ಭಾರತದ ರಾಯಭಾರ ಕಚೇರಿಯಲ್ಲಿ ಭದ್ರತಾ ಸಹಾಯಕರಾಗಿ ನೇಮಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎ ತನಿಖಾ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಐಎಸ್‌ಐಗಾಗಿ ಕೆಲಸ ಮಾಡಿದ ಆರೋಪದ ಮೇಲೆ ಸಿವಾಲ್‌ನನ್ನು ಬಂಧಿಸಲಾಗಿದೆ ಎಂದು ಉತ್ತರಪ್ರದೇಶದ ಎಟಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಸಿವಾಲ್ ವಿರುದ್ಧ ಲಕ್ನೋದ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 121ಎ (ದೇಶದ ವಿರುದ್ಧ ಯುದ್ಧ ಮಾಡುವುದು) ಮತ್ತು ಅಧಿಕೃತ ರಹಸ್ಯ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಸಿವಾಲ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಆಗಿ ನೇಮಕಗೊಂಡಿದ್ದರು.

Read More
Next Story