ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಕರ್ನಾಟಕದ ವಿವಿಧೆಡೆ ಯೋಗ ಪ್ರದರ್ಶನ
x
ವಿಧಾನ ಸೌಧದ ಮುಂಭಾಗ ಯೋಗದಿನಾಚರಣೆಯನ್ನು ಆಚರಿಸಲಾಯಿತು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಕರ್ನಾಟಕದ ವಿವಿಧೆಡೆ ಯೋಗ ಪ್ರದರ್ಶನ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ನ ವಿದ್ಯಾನಗರ ಟೌನ್‌ಶಿಪ್‌ನಲ್ಲಿ ಹಮ್ಮಿಕೊಂಡಿರುವ ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಂಡರು.


Click the Play button to hear this message in audio format

ಇಂದು ದೇಶದೆಲ್ಲೆಡೆ ಹತ್ತನೇ ʻಯೋಗ ದಿನಾಚರಣೆʼ ಯನ್ನು ಆಚರಿಸಲಾಗುತ್ತಿದೆ. ಈ ವರ್ಷ ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗʼ ಎಂಬ ಥೀಮ್‌ನಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲೂ ಸಡಗರ ಸಂಭ್ರಮದಿಂದ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ವಿಧಾನಸೌದದ ಮುಂಭಾಗದಲ್ಲಿ ಆಯುಷ್ ಇಲಾಖೆಯಿಂದ ಆಯೋಜಿಸಿದ್ದ 'ಯೋಗೋತ್ಸವ'ವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಯೋಗಾಸನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿರುವ ರಾಜ್ಯಪಾಲ ಗಥಾವರ್ ಚಂದ್ ಗೆಹ್ಲೋಟ್,ಮಾನಸಿಕ ಶಾಂತಿ ಮತ್ತು ಭಾವನಾತ್ಮಕ ತೃಪ್ತಿಯ ಮೇಲೆ ಯೋಗ ಆಳವಾಗಿ ಪ್ರಭಾವ ಬೀರುತ್ತದೆ. ಯೋಗವು ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಅವಿಭಾಜ್ಯವಾಗಿದೆ. ಅದರ ಪ್ರಾಮುಖ್ಯತೆಯನ್ನು ನಮ್ಮ ಧರ್ಮಗ್ರಂಥಗಳಲ್ಲಿ ದಾಖಲಿಸಲಾಗಿದೆ. ಇಂದು ವಿಶ್ವಾದ್ಯಂತ ಗುರುತಿಸಲ್ಪಟ್ಟಿದೆ. ಭಾರತವು ಯೋಗದ ಗುರುವಾಗಿದೆ. ಯೋಗವು ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮತೋಲನಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಅವರು ತಿಳಿಸಿದರು. ಯೋಗದ ಮೂಲಕ, ಒಬ್ಬ ವ್ಯಕ್ತಿಯು ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ ಮತ್ತು ಭಾವನಾತ್ಮಕ ತೃಪ್ತಿಯನ್ನು ಸಾಧಿಸುತ್ತಾನೆ. ಇದು ಭಾರತೀಯ ಸಂಪ್ರದಾಯ ಮತ್ತು ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದೆ ಎಂದರು.

ಬಳ್ಳಾರಿ ಯೋಗ ದಿನಾಚರಣೆಯಲ್ಲಿ ಸಿ.ಎಂ ಭಾಗಿ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬಳ್ಳಾರಿಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ನ ವಿದ್ಯಾನಗರ ಟೌನ್‌ಶಿಪ್‌ನಲ್ಲಿ ಹಮ್ಮಿಕೊಂಡಿರುವ ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಂಡರು.

ಪ್ರಾಣಾಯಾಮ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಕಾರ್ಯಕ್ರಮದಲ್ಲಿ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಈ.ತುಕಾರಾಂ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ನಟಿ ಶ್ರೀಲೀಲಾ, ವಚನಾನಂದ ಸ್ವಾಮೀಜಿ, ಶಾಸಕ ಶ್ರೀನಿವಾಸ್, ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಬಳ್ಳಾರಿಯಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು.

ಬಿಜೆಪಿ ವತಿಯಿಂದಲೂ ಯೋಗ ದಿನಾಚರಣೆ

ಬಿಜೆಪಿ ವತಿಯಿಂದ ನಗರದ ಮಲ್ಲೇಶ್ವರಂನಲ್ಲಿರುವ ತನ್ನ ರಾಜ್ಯ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಶಾಸಕ ಡಾ. ಸಿ ಎನ್ ಅಶ್ವಥ್ ನಾರಾಯಣ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಹಾಸನ, ಶಿವಮೊಗ್ಗ, ಮೈಸೂರು, ಬೆಳಗಾವಿ, ಬೀದರ್, ತುಮಕೂರು, ದಕ್ಷಿಣ ಕನ್ನಡ ಮತ್ತು ರಾಯಚೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Read More
Next Story