ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ
x

ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ


ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ (84) ಅವರು ಶನಿವಾರ (ಜೂ.15) ಬೆಳಿಗ್ಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹರಪ್ಪನಹಳ್ಳಿಯಲ್ಲಿ 1940ರಲ್ಲಿ ಮತ್ತಿಹಳ್ಳಿ ಮದನ ಮೋಹನ ಜನಿಸಿದ್ದು, ಇವರ ತಂದೆ ಮತ್ತಿಹಳ್ಳಿ ರಾಘವೇಂದ್ರ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಇವರದು ಪತ್ರಕರ್ತ ಕುಟುಂಬವಾಗಿದ್ದು, ಮಗ ಕೂಡ ರಾಘವ ಮತ್ತಿಹಳ್ಳಿ ಅವರೂ ಪತ್ರಕರ್ತರಾಗಿದ್ದಾರೆ.

1958 ವೃತ್ತಿ ಆರಂಭಿಸಿದ ಇವರು ‘ದಿ ಹಿಂದೂ’ ಪತ್ರಿಕೆಯಲ್ಲಿ ಅರೆಕಾಲಿಕ ವರದಾರರಾಗಿ ಬೆಳಗಾವಿಯಲ್ಲಿ ಕೆಲಸ ಆರಂಭಿಸಿದರು. ಗೋವಾದ ಸ್ವಾತಂತ್ರ್ಯ ಹೋರಾಟದ ಕೇಂದ್ರಬಿಂದು ಬೆಳಗಾವಿ ಬಗ್ಗೆ ವರದಿಗಳನ್ನು ಬರೆದು ‘ಮದನ ಮೋಹನ ಗೋವಾ’ ಎಂದೇ ಪ್ರಸಿದ್ಧರಾಗಿದ್ದರು. ಆಂಗ್ಲಭಾಷೆ ಪತ್ರಿಕೋದ್ಯಮದಲ್ಲಿ ದುಡಿದ ಅವರು ‘ದಿ ಹಿಂದೂ’ ಪತ್ರಿಕೆಗೆ ಸೇವೆ ಸಲ್ಲಿಸಿದ್ದರು. .

ಇವರಿಗೆ ರಾಜ್ಯೋತ್ಸವ, ಕರ್ನಾಟಕ ಮಾಧ್ಯಮ ಅಕಾಡೆಮಿ, ನಾಡೋಜ ಪ್ರಶಸ್ತಿಗಳು ಸಂದಿವೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಕಂಬನಿ ಮಿಡಿದಿದ್ದಾರೆ.

Read More
Next Story