ಮಧ್ಯಪ್ರದೇಶ: ಪಿಕ್ ಅಪ್ ವಾಹನ ಪಲ್ಟಿ; 14 ಮಂದಿ ಸಾವು, 21 ಮಂದಿಗೆ ಗಾಯ
x

ಮಧ್ಯಪ್ರದೇಶ: ಪಿಕ್ ಅಪ್ ವಾಹನ ಪಲ್ಟಿ; 14 ಮಂದಿ ಸಾವು, 21 ಮಂದಿಗೆ ಗಾಯ


ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಗುರುವಾರ (ಫೆಬ್ರವರಿ 29) 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕ್ ಅಪ್ ವಾಹನ ಅಪಘಾತಕ್ಕೀಡಾಗಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಮತ್ತು 21 ಮಂದಿ ಗಾಯಗೊಂಡಿದ್ದಾರೆ.

ವರದಿಗಳ ಪ್ರಕಾರ, ರಾತ್ರಿ 1.30 ರ ಸುಮಾರಿಗೆ ಬಡ್ಜರ್ ಘಾಟ್ ಬಳಿ ವಾಹನ ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದೆ. ಇದರಿಂದ ವಾಹನ ಪಲ್ಟಿಯಾಗಿ 14 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಿಂಡೋರಿ ಜಿಲ್ಲೆಯ ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂತ್ರಸ್ತರು ಕುಟುಂಬ ಕಾರ್ಯಕ್ರಮಕ್ಕೆಂದು ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ವರದಿ ಸ್ವೀಕರಿಸಿದ ತಕ್ಷಣ ಸಂತ್ರಸ್ತರಿಗೆ ಸಹಾಯ ಮಾಡಲು ದಿಂಡೋರಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಧಾವಿಸಿದರು.

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಮೋಹನ್ ಯಾದವ್ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಯಾದವ್ ಸ್ಥಳೀಯ ಆಡಳಿತಕ್ಕೆ ಸೂಚಿಸಿದ್ದಾರೆ.

ಈ ಅಪಘಾತದಲ್ಲಿ ಅನೇಕ ಅಮೂಲ್ಯ ಜೀವಗಳ ಅಕಾಲಿಕ ಮರಣದ ಬಗ್ಗೆ ಮುಖ್ಯಮಂತ್ರಿ ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ಕುಟುಂಬಗಳಿಗೆ ತಲಾ ₹ 4 ಲಕ್ಷ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ (CMO) ಹಿಂದಿಯಲ್ಲಿ ಟ್ವೀಟ್ ಮಾಡಿದೆ.

Read More
Next Story