ಮಂಗಳೂರು: ಮನೆ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸಹಿತ  ನಾಲ್ವರು ಸಾವು
x
ಉಳ್ಳಾಲ ಕುತ್ತಾರು ಮದನಿ ನಗರದಲ್ಲಿ ಮನೆ ಗೋಡೆ ಕುಸಿದು ಬಿದ್ದು ನಾಲ್ವರು ಸಾವು

ಮಂಗಳೂರು: ಮನೆ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸಹಿತ ನಾಲ್ವರು ಸಾವು

ಜೋರು ಮಳೆಯಿಂದಾಗಿ ಮನೆಯ ಗೋಡೆ ಇನ್ನೊಂದು ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.


Click the Play button to hear this message in audio format

ಜೋರು ಮಳೆಯಿಂದಾಗಿ ಮನೆಯ ಗೋಡೆ ಇನ್ನೊಂದು ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಬುಧವಾರ ( ಜೂನ್‌ 26) ಮುಂಜಾನೆ ಸಂಭವಿಸಿದೆ.

ಮೃತಪಟ್ಟವರನ್ನು ಯಾಸಿರ್‌(45), ಅವರ ಪತ್ನಿ ಮರಿಯಮ್ಮ(40) ಹಾಗೂ ಮಕ್ಕಳಾದ ರಿಯಾನ ಮತ್ತು ರಿಫಾನ್‌ ಎಂದು ಗುರುತಿಸಲಾಗಿದೆ. ಅಬೂಬಕ್ಕರ್‌ ಅವರ ಮನೆ ಗೋಡೆ ಯಾಸಿರ್‌ ಮನೆ ಮೇಲೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಮೂವರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ.

ಯಾಸಿರ್ ಬಂದರಿನಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಊಟ ಮುಗಿಸಿ ಕುಟುಂಬಸ್ಥರು ಮಲಗಿದ್ದು, ಮುಂಜಾನೆ ಪೋಷಕರು ಮತ್ತು ಹೆಣ್ಣು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ರಾತ್ರಿ ಸುರಿದ ಮಳೆಗೆ ಯಾಸಿರ್ ಅವರ ಮನೆಯ ಮೇಲೆ ಕಾಂಪೌಂಡ್ ಗೋಡೆ ಹಾಗೂ ಎರಡು ಅಡಿಕೆ ಮರಗಳು ಬಿದ್ದಿವೆ. ರಿಹಾನಾ ಮತ್ತು ರಿಫಾನ್ ನಗರದ ಖಾಸಗಿ ಶಾಲೆ ಮತ್ತು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

Read More
Next Story