NEET-UG 2024 | ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಪ್ರಧಾನ್
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಯ ಪದಾಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ಪರೀಕ್ಷೆಯ ಅಕ್ರಮಗಳಲ್ಲಿ ಭಾಗಿಯಾಗಿರುವುದನ್ನು ಕಂಡುಬಂದಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಯ ಪದಾಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಭಾನುವಾರ ಒಡಿಶಾದ ಸಂಬಲ್ಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನ್ ಈ ಹೇಳಿಕೆ ನೀಡಿದ್ದಾರೆ. ನಿಗದಿತ ಅವಧಿಗಿಂತ ಕಡಿಮೆ ಸಮಯ ನಿಗದಿಪಡಿಸಿದ್ದರಿಂದ ಅತೃಪ್ತರಾದ ಕೆಲ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ. ಸರ್ಕಾರವು ಗ್ರೇಸ್ ಅಂಕಗಳನ್ನು ನಿರಾಕರಿಸಿದೆ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ 1,563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಆದೇಶಿಸಲಾಗಿದೆ. ಎರಡು ಸ್ಥಳಗಳಲ್ಲಿ ಕೆಲ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಅವರು ತಿಳಿಸಿದರು. ಇದನ್ನು ಸರಕಾರವು ಗಂಭೀರವಾಗಿ ಪರಿಗಣಿಸಲಾಗಿದೆ. ನಾನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಭರವಸೆ ನೀಡುತ್ತೇನೆ. ನಾವು ಅದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳುತ್ತೇವೆ" ಎಂದು ಅವರು ಹೇಳಿದರು.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ)ಯ ಹಿರಿಯ ಅಧಿಕಾರಿಗಳು ಸಹ ತಪ್ಪಿತಸ್ಥರೆಂದು ಕಂಡು ಬಂದರೂ ಅವರನ್ನು ಬಿಡುವುದಿಲ್ಲ ಎಂದ ಅವರು, ಸರಕಾರವು ಈ ಬಗ್ಗೆ ಕಳವಳಗೊಂಡಿದೆ. ಯಾವುದೇ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಅತ್ಯಂತ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.
ಮೇ 5ರಂದು ದೇಶಾದ್ಯಂತ 571 ನಗರಗಳಲ್ಲಿ ಮತ್ತು 14 ಅಂತಾರಾಷ್ಟ್ರೀಯ ಕೇಂದ್ರಗಳಲ್ಲಿನ ಒಟ್ಟು 4,750 ಸೆಂಟರ್ಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದರು. ಜೂನ್ 4ರಂದು ರಿಸಲ್ಟ್ ಪ್ರಕಟವಾಗಿದ್ದು 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಕೊಡಲಾಗಿರುವುದು ಬೆಳಕಿಗೆ ಬಂದಿದೆ. ನೀಟ್ ಪರೀಕ್ಷೆ ಬಗ್ಗೆಯೇ ಸಾಕಷ್ಟು ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ಪಕ್ಷಗಳು ತೀವ್ರ ಟೀಕೆ ಮಾಡುತ್ತಿವೆ. ಸುಪ್ರೀಂ ಕೋರ್ಟ್ನಲ್ಲಿ ಪೆಟಿಶನ್ಗಳು ದಾಖಲಾಗಿವೆ. ಸರ್ವೋಚ್ಚ ನ್ಯಾಯಾಲಯವು 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಆದೇಶಿಸಿದೆ.
ಭಾರತದಲ್ಲಿ ಪದವಿಪೂರ್ವ ಮಟ್ಟದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಗೇಟ್‌ವೇ ಆಗಿರುವ NEET-UG ಪರೀಕ್ಷೆಯನ್ನು ಮೇ 5 ರಂದು ಭಾರತದ 571 ನಗರಗಳಲ್ಲಿ 4,750 ಕೇಂದ್ರಗಳಲ್ಲಿ ನಡೆಸಲಾಯಿತು. ಜೂನ್ 4ರಂದು ಫಲಿತಾಂಶ ಪ್ರಕಟವಾಗಿತ್ತು.