
ಮುಂದೊಂದು ದಿನ ಪಶ್ಚಿಮ ಬಂಗಾಳ ಬಾಂಗ್ಲಾದೇಶಕ್ಕೆ ಸೇರಲಿದೆ: ಸುವೇಂದು ಅಧಿಕಾರಿ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ; ಡಬಲ್ ಎಂಜಿನ್ ಸರ್ಕಾರ ರಚನೆ ಗುರಿ
ಪಶ್ಚಿಮ ಬಂಗಾಳದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಡುವೆ ಭಾರೀ ಹಣಾಹಣಿ ಇದೆ.
ಈ ಬೆಳವಣಿಗೆಗಳ ನಡುವೆಯೇ ಪಶ್ಚಿಮ ಬಂಗಾಳದಲ್ಲಿಯೂ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಡಬಲ್ ಇಂಜಿನ್ ಸರ್ಕಾರ ರಚನೆ ಆಗಲಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದ ಆಡಳಿತ ಕೊನೆಯಾಗಲಿದೆ ಎಂದು ಪಶ್ವಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರದ ಬಗ್ಗೆ ಮಾತನಾಡುವಾಗ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ.
ಇಲ್ಲಿನ ಸಂದೇಶ್‌ಖಾಲಿ ಬ್ಲಾಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಮಾತನಾಡಿದ ಅವರು, ಟಿಎಂಸಿ ಹಿಂದೂಗಳ ವಿರುದ್ಧ ಹಿಂಸಾಚಾರ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದಲ್ಲಿ ಹಿಂದೂಗಳು ಅಪಾಯದಲ್ಲಿ ಇದ್ದಾರೆ. ಟಿಎಂಸಿ ಪಕ್ಷವು ಬಾಂಗ್ಲಾದೇಶಿ ವಲಸಿಗರನ್ನು ರಾಜ್ಯದಲ್ಲಿ ನುಸುಳಲು ಮತ್ತು ನೆಲೆಸಲು ಅವಕಾಶ ನೀಡುತ್ತಿದೆ.
ಟಿಎಂಸಿ ಸರ್ಕಾರ ಮುಂದೊಂದು ದಿನ ಪಶ್ಚಿಮ ಬಂಗಾಳವನ್ನು ಬಾಂಗ್ಲಾದೇಶದ ಭಾಗವಾಗಿ ಮಾಡಲಿದೆ ಆಕ್ರೋಶ ಹೊರಹಾಕಿದ್ದಾರೆ.
ಇಲ್ಲಿನ ಸಂದೇಶ್‌ಖಾಲಿ ಬ್ಲಾಕ್‌ನಲ್ಲಿ ನಡೆದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಪ್ರಕರಣದ ಬಗ್ಗೆ ಅವರು ಟೀಕಿಸಿದ್ದು, ಜೆಎನ್‌ಯು ವಿದ್ಯಾರ್ಥಿಗಳು ಈ ವಿಷಯದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.
ಸಂದೇಶ್‌ಖಾಲಿಯಲ್ಲಿ TMC ನಾಯಕ ಷಹಜಹಾನ್ ಶೇಖ್ ಮತ್ತು ಅವರ ಬೆಂಬಲಿಗರ ವಿರುದ್ಧ ಭೂ ಅತಿಕ್ರಮಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಗಳು ಕೇಳಿಬಂದಿದ್ದು, ಭಾರೀ ಪ್ರತಿಭಟನೆ ನಡೆಯುತ್ತಿದೆ.
ಜನವರಿ 5ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಗುಂಪು ದಾಳಿ ನಡೆಸಿದ ನಂತರ ಷಹಜಹಾನ್ ಕಣ್ಮರೆಯಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.